ಶಿವಮೊಗ್ಗ | ಜೂನ್ 21,22ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ

Date:

ಶಿವಮೊಗ್ಗ ಜಿಲ್ಲಾ ಮಟ್ಟದ ‘ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ‘ಸಂವಿಧಾನ ಓದು ಅಭಿಯಾನ-ಕರ್ನಾಟಕ’ ಮತ್ತು ಶಿವಮೊಗ್ಗ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಆಯೋಜಿಸಲಾಗಿದ್ದು, ಜೂನ್ 21 ಮತ್ತು 22, 2025 ರಂದು ಶನಿವಾರ ಮತ್ತು ಭಾನುವಾರ ಎರಡು ದಿವಸ ನಡೆಸಲು ತೀರ್ಮಾನಿಸಲಾಗಿದೆ.ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಪ್ರತಿನಿಧಿಸಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳು, ಸಾಮಾಜಿಕ-ಸಾಂಸ್ಕೃತಿಕ ಹಾಗೂ ಪ್ರಗತಿಪರ ಆಶಯಉಳ್ಳ 250 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

- Advertisement -

ಈ ಶಿಬಿರವನ್ನು ನ್ಯಾಯಮೂರ್ತಿ ಹೆಚ್.ಎನ್‌. ನಾಗಮೋಹನದಾಸ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹಗಡೆ , ಸನ್ನಿಧಿ, ಪಾಲನಾ ನವೀಕರಣ ಕೇಂದ್ರದ ನಿರ್ದೇಶಕ ಫಾದ‌ರ್ ಕ್ಲಿಫರ್ಡ್ ರೋಶನ್ ಪಿಂಟೋ, ಹಿರಿಯ ವಕೀಲ ಜಿ. ಎಸ್. ನಾಗರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎರಡು ದಿನಗಳ ಕಾಲ ನಡೆಯಲಿರುವ ‘ಸಂವಿಧಾನ ಓದು ಅಧ್ಯಯನ ಶಿಬಿರ’ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮೊದಲನೆಯ ದಿನ ಸಂವಿಧಾನದ ರಚನೆ ಮತ್ತು ಮೂಲತತ್ವಗಳ ಕುರಿತು – ಗೌ. ನ್ಯಾಯಮೂರ್ತಿ ಹೆಚ್‌. ಎನ್‌. ನಾಗಮೋಹನದಾಸ್, ಸಂವಿಧಾನ ಮತ್ತು ಸಾಮಾಜಿಕನ್ಯಾಯ – ಬಿ. ರಾಜಶೇಖರಮೂರ್ತಿ, ಸಂವಿಧಾನ ಮತ್ತು ಜಾತ್ಯಾತೀತತೆ – ಆರ್. ರಾಮಕೃಷ್ಣ, ಎರಡನೇ ದಿನ ಸಂವಿಧಾನ ಮತ್ತು ಮಹಿಳೆ – ಶಾಂತಿ ನಾಗಲಾಪುರ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಿಗ್ಗ “ರಾಜಶೇಖರ ಅವರು ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ.

1001750158

ಎರಡನೆಯ ದಿನ ಮಧ್ಯಾಹ್ನ 1ಕ್ಕೆ ಸಮಾರೋಪ ಮತ್ತು ಪ್ರಶಸ್ತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರೋಪ ಸಮಾರಂಭದ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು , ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್ .ಆರ್ ಬಸವರಾಜಪ್ಪ , ದಲಿತ ಸಂಘರ್ಷ ಸಮಿತಿ, ಶಿವಮೊಗ್ಗ ರಾಜ್ಯ ಸಂಚಾಲಕರ ಎಂ. ಗುರುಮೂರ್ತಿ, ಜನಶಕ್ತಿ ಸಂಘಟನೆಯ ಕೆ. ಎಲ್ ಅಶೋಕ್, ಜನಪರ ಹೋರಾಟಗಾರ ಅನಂತ ರಾಮು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೆಚ್‌.ಎನ್.ನಾಗಮೋಹನದಾಸ್ ನಿರ್ವಹಿಸಲಿದ್ದಾರೆ. ಉಪಸ್ಥಿತರಾಗಿ ಎಲ್ಲಾ ಪ್ರಮುಖ ಸಂಘಟಕರು ಇರಲಿದ್ದಾರೆ.

ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದ ಆಸಕ್ತರು ನೊಂದಣಿ ಮಾಡಿಕೊಂಡು ಭಾಗವಹಿಸಲು ಈ ಫೋನ್ ನಂಬರ್‌ಗಳಿಗೆ .7483950580, 9448329757. ಸಂಪರ್ಕಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...