ಶಿವಮೊಗ್ಗ | ಗೌರಿ ಗಣೇಶ , ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವರೆಗೂ ಜಿಲ್ಲೆಯಾದ್ಯಂತ, ಡಿ ಜೆ ನಿಷೇಧ : ಡಿ ಸಿ ಆದೇಶ

Date:

ಶಿವಮೊಗ್ಗ, ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ.

- Advertisement -

ದಿನಾಂಕ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರಮುಖ, ಅತಿಸೂಕ್ಷ್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಾಗೂ ದಿನಾಂಕ : 05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸಲ್ಮಾನ್ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.

ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...