ಶಿವಮೊಗ್ಗ, ನಾಯಕ ವಾಲ್ಮೀಕಿ ಸಮಾಜದ ಮೀಸಲಾತಿಯನ್ನು ಬೇರೆಯವರು ಕಬಳಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸಮಾಜವನ್ನು ಕಡೆಗಾಣಿಸುತ್ತಿದ್ದಾರೆ. ಕುರುಬರು ಪರಿಶಿಷ್ಟವರ್ಗದ ಪಟ್ಟಿಗೆ ಬಂದರೆ ನಮ್ಮ ಸಮು ದಾಯಕ್ಕೆ ಬಹಳ ದೊಡ್ಡ ಅನ್ಯಾಯವಾಗುತ್ತದೆ ಎಂದು ವಾಲ್ಮೀಕಿ ಸಮಾಜ ಹೇಳಿದೆ.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಸಂಘದ ಜಿಲ್ಲಾಧ್ಯಕ್ಷ ಎಚ್.ಆರ್. ಹನುಮಂತಪ್ಪ ಮಾತನಾಡಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಮಾಜದ ಮುಖಂಡರು, ತಳವಾರರ ಹೆಸರಿನಲ್ಲಿ ಇತರೆ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಕೂಡಲೇ ಇದನ್ನು ನಿಲ್ಲಿಸಬೇಕು.
ಹಿಂದುಳಿದ ವರ್ಗಗಳ ಪ್ರವರ್ಗ ಒಂದರಲ್ಲಿರುವ ಬೆಸ್ತ ಅಂಬಿಗ, ಕಬ್ಬಲಿಗ, ಕೋಲಿ ಮುಂತಾದ ಜಾತಿಯವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಅಂತಹ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸ ಬೇಕು ಎಂದು ಪ್ರತಿಭಟನಾಕಾರರು ತಿಳಿಸಿದರು.