ಕೌಟುಂಬಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಆರೋಪಿಗೆ ಶಿವಮೊಗ್ಗ 2ನೇ ಜೆಎಂಎಫ್‌ಸಿ ನ್ಯಾಯಾಲಯ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿದೆ. ಚನ್ನಗಿರಿ ತಾಲೂಕು ದೇವರಹಳ್ಳಿ ನಿವಾಸಿ ಶಶಿಧರ್ ಶರ್ಮ (43) ಶಿಕ್ಷೆಗೊಳಗಾದ ವ್ಯಕ್ತಿ.

ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನ ದಾಖಲಿಸಿಕೊಂಡ ಮಹಿಳಾ ಪೊಲೀಸ್ ಠಾಣೆಯ ಆಗಿನ ತನಿಖಾಧಿಕಾರಿ ಪ್ರಭಾವತಿ ಸೇತುಸನದಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು.
2017 ನೇ ಸಾಲಿನಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತಿ ಶಶಿಧರ ಶರ್ಮ ಮತ್ತು ಅತ್ತೆ ಜಯರತ್ನಮ್ಮ ವಿರುದ್ಧ ವರದಕ್ಷಿಣೆ ಕಿರುಕುಳ, ದೌರ್ಜನ್ಯ ಪ್ರಕರಣವನ್ನ ಮಮತಾ ರಾಣಿ ಎಂಬುವರು ದಾಖಲಿಸಿದ್ದರು.
ಇದನ್ನೂ ಓದಿ: ಶಿವಮೊಗ್ಗ | ಈದ್ಗಾ ಮೈದಾನಕ್ಕೆ ಸಿಸಿಟಿವಿ ಕಣ್ಗಾವಲು