ಶಿವಮೊಗ್ಗ | ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗವು ಸೇರಿ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Date:

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ.

- Advertisement -

ಶಿವಮೊಗ್ಗ ತಾಲೂಕು ರಜೆ :ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಜು. 26ರ ಶನಿವಾರದಂದು ರಜೆ ಘೋಷಿಸಿದೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ ಎಂದು ತಹಸೀಲ್ದಾರ್ ವಿ.ಎಸ್. ರಾಜೀವ್ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಭದ್ರಾವತಿ ರಜಾ ಘೋಷಣೆ ;ಭದ್ರಾವತಿ ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಭದ್ರಾವತಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ಜು.26ರ ಶನಿವಾರ ರಜೆ ಘೋಷಿಸಿದೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಆದೇಶದಲ್ಲಿ ತಿಳಿಸಿದ್ದಾರೆ.

ಶಿಕಾರಿಪುರ ರಜೆ ಘೋಷಣೆ :ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಪಿಯು ಕಾಲೇಜ್ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ನಿರಂತರ ಮಳೆ ಇರುವುದರಿಂದ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ತಹಸೀಲ್ದಾರ್ ಆದೇಶಿಸಿದ್ದಾರೆ.

ಸಾಗರ ತಾಲೂಕು ರಜೆ :ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜು. 26ರ ಶನಿವಾರ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಸೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶದಲ್ಲಿ ತಿಳಿಸಿದ್ದಾರೆ.

ಹೊಸನಗರ ತಾಲೂಕಿಗೆ ರಜೆ ;ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ ಶಾಲೆಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...