ಶಿವಮೊಗ್ಗ | ಶಿಕ್ಷಣ ಸಚಿವ ಅನ್‌ಪಡ್, ಪ್ರತಾಪ ಸಿಂಹ ಹೇಳಿಕೆ ಖಂಡಿಸಿ;ಯೂತ್ ಕಾಂಗ್ರೇಸ್ ಪ್ರತಿಭಟನೆ

Date:

Advertisements

ಕಳೆದ ಕೆಲವು ದಿನಗಳಿಂದ ಆಪರೇಷನ್ ಸಿಂಧೂರ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ, ಹೇಳಿಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಾಕ ಟ್ರೊಲ್ ಗೆ ಒಳಗಾಗುತ್ತಿದ್ದಾರೆ. ಈ ಸಂಬಂಧ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಧು ಬಂಗಾರಪ್ಪ ಅವರನ್ನ ಅನ್‌ಪಡ್ ಸಚಿವ ಎಂದು ಪದ ಬಳಸುವ ಮುಖಾಂತರ ಶಿಕ್ಷಣ ಸಚಿವ ಬಗ್ಗೆ ಹೇಳಿಕೆಯೊಂದನ್ನ ನೀಡಿದ್ದರು. ಈ ಸಂಬಂಧ ಶಿವಮೊಗ್ಗ ಯೂತ್ ಕಾಂಗ್ರೇಸ್ ಇಂದು ವಿನೂತನ ಪ್ರತಿಭಟನೆ ಮಾಡುವ ಮೂಲಕ ಈ ಪ್ರತಾಪ್ ಸಿಂಹರನ್ನ ಹುಚ್ಚಾಸ್ಪತ್ರೆಗೆ ದಾಖಲಿಸಿ ಎಂದು ಅಗ್ರಹಿಸಿದ್ದಾರೆ.

ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಅನ್‌ಪಡ್ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರಿನ ಮಾಜಿ ಸಂಸದ ಬಿಜಪಿ ಮುಖಂಡ ಪ್ರತಾಪ ಸಿಂಹರಿಗೆ ಹುಚ್ಚು ಹಿಡಿದಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪತ್ರ ಬರೆಯುವ ಮೂಲಕ ಆಗ್ರಹಿಸುತ್ತಿದ್ದೇವೆ ಎಂದು ಯೂತ್ ಕಾಂಗ್ರೇಸ್ ಪ್ರತಿಭಟನೆಯಲ್ಲಿ ಅಗ್ರಹಿಸಿದರು.

1001643922

ಪ್ರತಾಪಸಿಂಹ ಪತ್ರಕರ್ತರಾಗಿ ಕೆಲಸ ಮಾಡಿದವರು. ಈ ದೇಶದ ಸಂವಿಧಾನ, ವ್ಯವಸ್ಥೆಯ ಬಗ್ಗೆ ಸಾಕಷ್ಟು ತಿಳಿದುಕೊಂಡಿರಬೇಕಿತ್ತು. ಆದರೆ, ಜನರಿಂದ ಆಯ್ಕೆಯಾಗಿ ರಾಜ್ಯದ ಶಿಕ್ಷಣ ಸಚಿವರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿರುವ, ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತಿರುವ ಮಧು ಬಂಗಾರಪ್ಪ ಅವರನ್ನು ಅನ್‌ಪಡ್ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವ ಕೆಲಸ ಮಾಡಿದ್ದಾರೆ. ಇಂತಹ ವ್ಯಕ್ತಿ ಸಾರ್ವಜನಿಕ ಕ್ಷೇತ್ರದಲ್ಲಿ ಇರುವುದಕ್ಕೆ ಅರ್ಹರಲ್ಲ ಎಂದರು.

Advertisements

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತನಾಗಿ ರಾಜಕೀಯವಾಗಿ ನಿರಾಶ್ರಿತನಂತಾಗಿರುವ ಪ್ರತಾಪ ಸಿಂಹರಿಗೆ ಹುಚ್ಚು ಹಿಡಿರುವುದು ಖಚಿತವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಹಾಗಾಗಿ ಕಂಡಕಂಡವರನ್ನು ತಿಳಿಗೇಡಿ ಎನ್ನುವುದು, ಬೇಕಾಬಿಟ್ಟಿ ಟೀಕಿಸುವುದು ಮಾಡುತ್ತಿದ್ದಾರೆ. ಪ್ರತಾಪ ಸಿಂಹ ಸಂಸದರಾಗಿ ಮೈಸೂರು-ಕೊಡಗಿನಲ್ಲಿ ಯಾವ ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು? ಕೇವಲ ಟೀಕೆಗಳನ್ನು ಮಾಡುತ್ತಾ, ಪಕ್ಷದ ವರಿಷ್ಟರನ್ನು ಓಲೈಸುತ್ತಾ ಇದ್ದ ಪ್ರತಾಪ ಸಿಂಹರನ್ನು ರಾಜಕೀಯಕ್ಕೆ ನಾಲಾಯಕ್ ವ್ಯಕ್ತಿ ಎಂದು ಅವರ ಪಕ್ಷದ ವರಿಷ್ಟರೇ ತಿರಸ್ಕರಿಸಿದ್ದಾರೆ ಎಂದರು. ಇದರಿಂದ ಪ್ರತಾಪಸಿಂಹ ತನ್ನ ಅಸ್ತಿತ್ವಕ್ಕಾಗಿ ಬೇಕಾಬಿಟ್ಟಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದರು.

ಈ ದೇಶದ ಸಂವಿಧಾನದಲ್ಲಿರುವ ಅವಕಾಶದಿಂದಾಗಿಯೇ ಇಂದು ಮಧು ಬಂಗಾರಪ್ಪನವರು ಶಾಸಕರಾಗಿ, ಶಿಕ್ಷಣ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಶಿಕ್ಷಣ ಸಚಿವರಾದ ಮೇಲೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯ ಫಲಿತಾಂಶದಲ್ಲಿ ಆಗಿರುವ ಗಣನೀಯ ಹೆಚ್ಚಳವೇ ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ.

ಆದರೆ, ಪ್ರತಾಪಸಿಂಹ ಅಧಿಕಾರದಲ್ಲಿದ್ದಾಗ ಮಾಡಿಕೊಂಡಂತಹ ಆವಾಂತರಗಳು ಏನೇನು ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ. ರಾಜಕೀಯವಾಗಿ ನಿರಾಶ್ರಿತರಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿರುವ ಪ್ರತಾಪಸಿಂಹ ಕೂಡಲೇ ಮಧು ಬಂಗಾರಪ್ಪನವರ ಮತ್ತು ಈ ನಾಡಿನ ಜನತೆಯ ಕ್ಷಮೆ ಯಾಚಿಸಬೇಕು ಎಂದು ಅಗ್ರಹಿಸಿದರು.ಬಿಜೆಪಿ ವರಿಷ್ಟರು ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಇಲ್ಲವಾದರೆ ಅವರ ಹುಚ್ಚು ಹೇಳಿಕೆಗಳಿಂದ ಜನತೆ ಬಿಜೆಪಿ ವರಿಷ್ಟರ ಮೇಲೆ ಮುಗಿಬೀಳುವ ಸಾಧ್ಯತೆ ಇದೆ.

1001644176

ಆದ್ದರಿಂದ ಇಂದು ಯುವ ಕಾಂಗ್ರೆಸ್‌ನಿಂದಲೇ ಪ್ರತಾಪಸಿಂಹರನ್ನು ಆಸ್ಪತ್ರೆಗೆ ಸೇರಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಇದರ ಸದ್ಬಳಕೆ ಆಗುವಂತೆ ಬಿಜೆಪಿ ವರಿಷ್ಟರು ನೋಡಿಕೊಳ್ಳಲಿ ಎಂದು ಈ ಮೂಲಕ ತಿಳಿಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ಯುವ ನಾಯಕ ಆಸಿಫ್, ಚೇತನ್, ಮಧುಸೂದನ್, ಗಿರೀಶ್ ಬುಕ್ಕಳಾಪುರ ಹರ್ಷಿತ್ ಗೌಡ ಎಸ್. ಜಿಲ್ಲಾಧ್ಯಕ್ಷರು ,ಚರಣ್ ಶೆಟ್ಟಿ ಶಿವಮೊಗ್ಗ ವಿಧಾನಸಭಾಧ್ಯಕ್ಷರು, ಪ್ರವೀಣ್ ಕುಮಾರ್ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾಧ್ಯಕ್ಷರು ಬ್ಲಾಕ್ ಅಧ್ಯಕ್ಷರುಗಳಾದ ಸಕ್ಲೇನ್, ಪ್ರವೀಣ್, ಗಿರೀಶ್,. ಶಶಿಕುಮಾರ್ N S U I ಜಿಲ್ಲಾ ಅಧ್ಯಕ್ಷರಾದ ವಿಜಯ್ ಶಿವಕುಮಾರ್ ಅನಿಲ್ ಪಾಟೀಲ್,ನಿಖಿಲ್,ನೂರ್ ಅಹ್ಮದ್ ,ಅಶೋಕ್,ಧನರಾಜ್ ಪುರಲೆ ಬಾಬು ,ಅನಂತ್ ,ರವಿ ಕಟಿಕೆರೆ ,ಗೌತಮ್, ಚಂದ್ರಾಜಿ ವರುಣ್,ತೌಫಿಕ್,ಅಶೋಕ್ ಮತ್ತಿತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X