ಶಿವಮೊಗ್ಗ | ದಾಖಲೆಯಲ್ಲಿ ಮೃತರಾಗಿದ್ದ ವೃದ್ಧ ಮಹಿಳೆ ಮಧು ಬಂಗಾರಪ್ಪರ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ

Date:

Advertisements

ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ಎಂದು ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಇಂದು ಸಚಿವ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು.

ಈ ವೇಳೆ ಸಾಕಷ್ಟು ಅರ್ಜಿಗಳು ಸಚಿವರ ಮುಂದೆ ಬಂದವು. ಹೊಸನಗರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಬಹಳ‌ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಇಲ್ಲಿನ ಈಡಿಗರ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisements

ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುವುದರಿಂದ ಎಲ್ಲ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇಲ್ಲಿ ಹಾಜರಾಗುವ ಕಾರಣ ಜನರ ಸಮಸ್ಯೆಗಳು ಅರ್ಥ ಆಗುತ್ತವೆ.‌ ಪರಿಹಾರಕ್ಕೆ ಅನೇಕ ಕಾನೂನು ಇದ್ದು, ಅವುಗಳನ್ನು ಅನ್ವಯಿಸಿ, ಸಾರ್ವಜನಿಕರಿಗೆ ಅನುಕೂಲ‌ ಮಾಡಲಾಗುವುದು ಎಂದರು.

1001504821

ಮುಂದಿನ ದಿನಗಳಲ್ಲಿ‌ ಎಲ್ಲ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಲಾಗುವುದು. ಮುಖ್ಯಮಂತ್ರಿಗಳು ಸಹ ಬೇರೆ ಬೇರೆ ಜಿಲ್ಲೆಗಳಿಗೆ ತೆರಳಿ ಜನಸ್ಪಂದನ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಾರೆ.‌ಆಡಳಿತ ಸುಧಾರಣೆಯಲ್ಲಿ‌ ಇಂತಹ ಕಾರ್ಯಕ್ರಮಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಯಾವುದೇ ಸಮಸ್ಯೆಗಳಿದ್ದರೂ ಚರ್ಚಿಸಿ, ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ನೇರವಾಗಿ ಮಾತನಾಡಿ, ಇತ್ಯರ್ಥ ಪಡಿಸಲು ಇಡೀ ಜಿಲ್ಲಾ ಆಡಳಿತ ಯಂತ್ರವೇ ಇಂದು ಇಲ್ಲಿ ಹಾಜರಿದ್ದು, ಮುಕ್ತ ಚರ್ಚೆ ನಡೆಯಲಿ, ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಉತ್ತಮ‌ ಕಾರ್ಯಕ್ರಮವಾಗಲಿ ಎಂದರು.

ವಿಶೇಷವಾಗಿ ಎಲ್ಲರ ಗಮನ ಸೆಳೆದಿದ್ದು 80 ವರ್ಷದ ಮಳವಳ್ಳಿ ಗ್ರಾಮದ ಪಾರ್ವತಮ್ಮ ಎಂಬುವವರನ್ನು 2021 ರಲ್ಲಿ‌ ಪಡಿತರ ಚೀಟಿಯಲ್ಲಿ ಮರಣ ಹೊಂದಿರುವುದಾಗಿ ನಮೂದಿಸಿ ಪಡಿತರ ಚೀಟಿ ರದ್ದುಪಡುಸಲಾಗಿದೆ.

ತಾವು ಜೀವಂತವಾಗಿದ್ದು ವಂಚಿತರಾಗಿದ್ದ ಸೌಲಭ್ಯಗಳನ್ನು ನೀಡಬೇಕೆಂದು ಖುದ್ದು ಸಚಿವರಿಗೆ ಅರ್ಜಿ ಸಲ್ಲಿಸಿದರು. ಸಚಿವರು ಪ್ರತಿಕ್ರಿಯಿಸಿ, ಈ ಅಚಾತುರ್ಯವೆಸಗಿ ತೊಂದರೆಪಡಿಸಿದ ಅಧಿಕಾರಿ ವಿರುದ್ದ ಸೂಕ್ತ ಕ್ರಮ‌ ಕೈಗೊಳ್ಳುವಂತೆ ಸೂಚನೆ ನೀಡಿದರು.

ಚುನಾಯಿತ ಪ್ರತಿನಿಧಿಗಳು, ಪ.ಪಂ. ಅಧ್ಯಕ್ಷ ನಾಗಪ್ಪ, ಪ.ಪಂ ಉಪಾಧ್ಯಕ್ಷೆ ಚಂದ್ರಕಲಾ,ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಚಿದಂಬರ, ಕೆಡಿಪಿ ಸದಸ್ಯರು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ‌ ಸಿದ್ಧಲಿಂಗ ರೆಡ್ಡಿ, ಜಿ.ಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಸಾಗರ ಉಪ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ಹೊಸನಗರ ಪ್ರಭಾರ ಎಸಿ ರಶ್ಮಿ, ಪ.ಪಂ, ಗ್ರಾ.ಪಂ.ಗಳ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X