ಶಿವಮೊಗ್ಗ | ಈಶ್ವರಪ್ಪರ ಸಂಸ್ಥೆಯ ಗೀತಗಾಯನ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಕಳುಹಿಸಬೇಡಿ: ಎನ್ ಎಸ್ ಯು ಐ

Date:

Advertisements

ಶಿವಮೊಗ್ಗ, ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಮತ್ತು ಮಂಥನ ಟ್ರಸ್ಟ್ ನಡೆಸುತ್ತಿರುವ ಗೀತಗಾಯನ ಸ್ಪರ್ಧೆ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸದಂತೆ ಶಿವಮೊಗ್ಗ ಎನ್.ಎಸ್.ಯು.ಐ. ಘಟಕದ ವತಿಯಿಂದ ಶಿಕ್ಷಣ ಸಚಿವರಿಗೆ ಇಂದು ಮನವಿ ನೀಡಿದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಅಧ್ಯಕ್ಷತೆಯ ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಹಾಗೂ ಮಂಥನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ 1975ರ ತುರ್ತು ಪರಿಸ್ಥಿತಿಯ ಕರಾಳ ನೆನಪಿನ 50ನೇ ವರ್ಷದ ಅಂಗವಾಗಿ 2025ರ ಜುಲೈ 19ರಂದು ಶಿವಮೊಗ್ಗ ನಗರದ ಮಟ್ಟದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಆಯೋಜಿಸಿದ್ದು, ಈ ಕಾರ್ಯಕ್ರಮ ಯುವಜನತೆಯಲ್ಲಿ ರಾಜಕೀಯ-ಕೋಮು ದ್ವೇಷ ಭಾವನೆ ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ಕಾರ್ಯಕ್ರಮವಾಗಿದೆ ಎಂದು ಎನ್ ಎಸ್ ಯು ಐ ಆರೋಪಿಸಿದೆ.

ಕೆ.ಎಸ್. ಈಶ್ವರಪ್ಪನವರು ಶಾಸಕರಾಗಿ, ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಗಳಾಗಿ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದ್ದರಿಂದಾಗಿ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ 40% ಕಮಿಷನ್ ಪಡೆದು ಭ್ರಷ್ಟಾಚಾರವೆಸಗಿದ್ದರಿಂದ ಬಿಜೆಪಿ ಅವರಿಗೆ ಟಿಕೆಟ್ ನೀಡದೇ ರಾಜಕೀಯವಾಗಿ ಮೂಲೆಗುಂಪು ಮಾಡಿದೆ. ತಮ್ಮ ರಾಜಕೀಯ ಜೀವನ ಮುಗಿದ ಅಧ್ಯಾಯ ಎಂದು ಗೊತ್ತಿದ್ದರೂ ನಾಯಕತ್ವ ಗುಣಗಳೇ ಇಲ್ಲದ ಅವರ ಪುತ್ರ ಕೆ.ಈ. ಕಾಂತೇಶ್‍ಗೆ ರಾಜಕೀಯದಲ್ಲಿ ನೆಲೆಯೂರಿಸುವ ಉದ್ದೇಶದಿಂದ ಕೆ.ಎಸ್.ಈಶ್ವರಪ್ಪನವರು ಈಗ ದೇಶಭಕ್ತಿಯ ನಾಟಕವಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ಹೀಗಾಗಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮ ನೆಪದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ತಮಗೆ ಅಧಿಕಾರವಿಲ್ಲದಿದ್ದಾಗ ಕಾಲಹರಣಕ್ಕೆಂದು ಶ್ರೀಗಂಧ ಸಂಸ್ಥೆ ಸ್ಥಾಪಿಸಿ ಆ ಮೂಲಕ ಒಂದಿಷ್ಟು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿದ್ದರು. ಅಧಿಕಾರ ಬಂದಾಗ ಶ್ರೀಗಂಧ ಸಂಸ್ಥೆಯ ಚಟುವಟಿಕೆಗಳನ್ನೇ ಸ್ಥಗಿತಗೊಳಿಸಿದ್ದರು ಎಂದಿದ್ದಾರೆ.

ಇದೀಗ ರಾಜಕೀಯವಾಗಿ ಬಿಜೆಪಿಯಿಂದ ಹೊರಹಾಕಲ್ಪಟ್ಟಿರುವ ಈಶ್ವರಪ್ಪನವರು ಬಿಜೆಪಿ ವರಿಷ್ಟರನ್ನು ಓಲೈಕೆ ಮಾಡಲು ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ ಎಂದು ಅಕ್ಷಪಿಸಿದ್ದಾರೆ.

ಶ್ರೀಮತಿ ಇಂದಿರಾಗಾಂಧಿಯವರು ದೇಶದ ಅಂದಿನ ಆರ್ಥಿಕ-ರಾಜಕೀಯ ಪರಿಸ್ಥಿತಿಯನ್ನಾಧರಿಸಿ ತುರ್ತು ಪರಿಸ್ಥಿತಿ ಹೇರಿಕೆ ಮಾಡಿದ್ದರು. ಆದರೆ, ಈಶ್ವರಪ್ಪ ತಮ್ಮ ರಾಜಕೀಯ ತೆವಲಿಗೋಸ್ಕರ ವಿದ್ಯಾರ್ಥಿಗಳಿಗೆ ‘ತುರ್ತು ಪರಿಸ್ಥಿತಿಯ ಕರಾಳ ನೆನಪು’ ಎಂದು ಹೇಳುತ್ತಾ ಇಂತಹ ಕಾರ್ಯಕ್ರಮ ಆಯೋಜಿಸಿ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಂಡು ಅವರಲ್ಲಿ ರಾಜಕೀಯ-ಕೋಮು ಪ್ರಚೋದನಾ ಭಾವನೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಈಶ್ವರಪ್ಪನವರಿಗೆ ಈ ದೇಶದ ಬಗ್ಗೆ ನೈಜ ಕಾಳಜಿ ಇದ್ದರೆ, ಗೋದ್ರಾ ಹತ್ಯಾಕಾಂಡದಲ್ಲಿ ನಡೆದ ಸಾವಿರಾರು ಜನರ ಮಾರಣಹೋಮವನ್ನು ನೆನಪು ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

ರಾಜಕೀಯ ಉದ್ದೇಶಕ್ಕಾಗಿ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುವುದು ಬೇಡ ಎಂದು ಮನವಿ ಮಾಡಿದ್ದಾರೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಇಂತಹ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸದಂತೆ ಆದೇಶ ಮಾಡಲು ನಿರ್ದೇಶನ ನೀಡಬೇಕು ಮತ್ತು ಇಂತಹ ಕಾರ್ಯಕ್ರಮಗಳು ಕೆ.ಎಸ್. ಈಶ್ವರಪ್ಪ ಮತ್ತು ಅವರ ಕುಟುಂಬದ ಒಡೆತನದ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಿದ್ದರೂ ರದ್ದುಪಡಿಸುವಂತೆ ಸೂಚನೆ ನೀಡಬೇಕೆಂದು ಈ ಮೂಲಕ ಶಿವಮೊಗ್ಗ ಎನ್.ಎಸ್.ಯು.ಐ. ಘಟಕದ ವತಿಯಿಂದ ಮನವಿ ಮಾಡುತ್ತಿದ್ದೇವೆ ಎಂದು ಇಂದು ಶಿವಮೊಗ್ಗ ನಗರದಲ್ಲಿ ಮಧು ಬಂಗಾರಪ್ಪ ಅವರಿಗೆ ಮನವಿ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ , ಹಾಗೂ NSUI ನಗರ ಅಧ್ಯಕ್ಷ ರವಿ HL, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್,ಜೀವನ್, ನಗರ ಪ್ರಧಾನ ಕಾರ್ಯದರ್ಶಿ ಆದಿತ್ಯ, ಸುಭಾನ್, ಸಾಗರ್, ನಂದೀಶ್, ಶ್ರೀಕಾಂತ್, ಮಂಜು, ಚಂದು ಸಚಿವರಿಗೆ ಮನವಿ ಸಲ್ಲಿಸಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X