ಶಿವಮೊಗ್ಗ ಜಿಲ್ಲೆಯ ಸಾಗರ :ತಾಲೂಕಿನ ಆನಂದಪುರ ಸಮೀಪದ ಕಣ್ಣೂರಿನಲ್ಲಿ ತಮ್ಮ ಸ್ವಂತ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ರೈತ ಸಾವನ್ನಪ್ಪಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ.
ಕಣ್ಣೂರಿನ ಸತ್ಯನಾರಾಯಣ ಕೈಸೋಡಿ (೫೦) ಸಾವನ್ನಪ್ಪಿದ್ದಾರೆ. ಶುಕ್ರವಾರ ತಮ್ಮ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ತಕ್ಷಣ ಆನಂದಪುರದ ಸರ್ಕಾರಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆ ತಂದಿದ್ದಾರೆ ವೈದ್ಯರು ರೈತ ಸಾವನಪ್ಪಿದ್ದಾನೆ ಎಂದು ದೃಢಪಡಿಸಿದ್ದಾರೆ.