ಶಿವಮೊಗ್ಗ | ಒಳಮೀಸಲಾತಿ ಸಮೀಕ್ಷೆಯಿಂದ ಅಲೆಮಾರಿಗಳು ಬಿಟ್ಟುಹೋಗುವ ಅತಂಕ : ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಆರೋಪ

Date:

ಶಿವಮೊಗ್ಗ ಈಗ ನಡೆಯುತ್ತಿರುವ ಒಳಮೀಸಲಾತಿ ಸಮೀಕ್ಷೆಯಲ್ಲಿ ಯಾವುದೇ ನೆಲೆ ಇಲ್ಲದ ಅಲೆಮಾರಿ ಜನಾಂಗಗಳು ಬಿಟ್ಟುಹೋಗುವ ಸಂಭವವಿದೆ ಎಂದು ಕರ್ನಾಟಕ ಪ.ಜಾ ಮತ್ತು ಪ.ಪಂಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಆತಂಕ ವ್ಯಕ್ತಪಡಿಸಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲೆಮಾರಿ ಸಮುದಾದವರಲ್ಲಿ ಜಾಗೃತಿ ಮೂಡಿಸಲು ಸಮೀಕ್ಷೆಯನ್ನು ಹೋಬಳಿ ಮಟ್ಟದಲ್ಲಿ ಕನಿಷ್ಠ 3 ದಿನಗಳ ಕಾಲ ನಡೆಸುವಂತೆ ಮುಖ್ಯಮಂತ್ರಿಯ ಮೇಲೆ ಒತ್ತಡ ಹೇರಲು ಜಿಲ್ಲಾಧಿಕಾರಿ ಮೂಲಕ‌ ಮನವಿ ಸಲ್ಲಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಯಾವುದೇ ಸಮುದಾಯಕ್ಕೆ ದತ್ತಾಂಶಗಳು ಇಲ್ಲದೆ ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ಆದುದರಿಂದಲೇ ಮೇ.5 ರಿಂದ ಮನೆ ಮನೆಗಳಿಗೆ ತೆರಳಿ ಸಮೀಕ್ಷೆ ಮಾಡಲಾಗುತ್ತಿದೆ. ಅವಕಾಶ ವಂಚಿತರಾದ ಸಾಮಾಜಿಕ ಕಳಂಕಿತರಾದವರು ಕಣಿ ಹೇಳುವ, ಧಾರ್ಮಿಕ ಭಿಕ್ಷಾಟನೆ ಮಾಡುತ್ತಿದ್ದ ಪ.ಜಾತಿಯ ಅಲೆಮಾರಿಗಳಾಗಿದ್ದಾರೆ ಎಂದರು.

2016 ರಲ್ಲಿ ದೊಂಬರ, ಸುಡುಗಾಡುಸಿದ್ದ, ಕೊರಚ, ಕೊರಮ, ಹಂದಿ ಜೋಗಿ, ಶಿಳ್ಳೆಕ್ಯಾತ, ಬುಡುಗಜಂಗಮ, ಘಂಟಿಚೋರ, ಮುಕ್ರಿ, ಚನ್ನ ದಾಸರ, ಮಾಲದಾಸರ, ಮಾಂಗ್, ಗಾರುವಾಡಿ, ಗೋಸಂಗಿ, ಸಿಂಧೋಳ್ಳು, ಪಾಲೆ, ಅಜಿಲ, ಆದಿಲ ಇತ್ಯಾದಿ 51 ಸಮುದಾಯಗಳು ಅಲೆಮಾರಿಗಳು, ಮುಕ್ತ ಬುಡಕಟ್ಟು ಅತೀ ಸೂಕ್ಷ್ಮ ಎಂದು ಗುರುತಿಸಿದೆ ಎಂದರು.

24 ಜಿಲ್ಲೆಗಳ ಪ್ರವಾಸ ಮಾಡಿ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದೇನೆ. ತಿಳುವಳಿಕೆ ಶಿಕ್ಷಣ ಇಲ್ಲದೆ ಹೊಟ್ಟೆಪಿಗಾಗಿ ವಿವಿಧ ಕೆಲಸ ಮಾಡುತ್ತಿದ್ದಾರೆ. ವೋಟರ್ ಐಡಿ, ಕ್ಯಾಸ್ಟ್ ಚೋಪಡಿಯಲ್ಲಿ ವಾಸಚಾಗಿರುವ ವಿಶೇಷ ತಜ್ಞರ ಆಯೋಗವು ಹೋಬಳಿ ಮಟ್ಟದಲ್ಲಿ ಅಲೆಮಾರಿ ವಿಶೇಷ ಸಮೀಕ್ಷೆ ಕಾರ್ಯಕ್ರಮ ಕೈಗೊಳ್ಳಬೇಕು ಎಂದರು.

ನಿಗಮದಿಂದ ಪ್ರತ್ಯೇಕ ಸಮೀಕ್ಷೆ ಮಾಡಲು ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ಮತ್ತು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆಯೋಗ ಈ ಬಗ್ಗೆ ಕ್ರಮ ಜರುಗಿಸಿಲ್ಲ. ವಿಖಾಸವಿಲ್ಲದೆ ಬದುತ್ತಿರುವ ಈ ಸಮುದಾಯಕ್ಕೆ ಜಿಲ್ಲಾ ಅನುಷ್ಠಾನ ಸಮಿತಿ ನೀಡಬೇಕು. ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ದೂರಿದರು. ಪ್ರವಾಸದಿಂದ ವಿಶೇಷ ಶಿಬಿರ ನಡೆಸಿ ಸ್ಥಳ ಮಹಜರ್ ಮಾಡಿ ವಂಶವೃಕ್ಷ, ಜಾತಿ ಸೆರ್ಟಿಫಿಕೇಟ್ ನೀಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...