ಶಿವಮೊಗ್ಗ | ಸರ್ಜಿ ಆಸ್ಪತ್ರೆಯಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ

Date:

Advertisements

ಶಿವಮೊಗ್ಗ, ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಸರ್ಜಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ

ಈ ಬಗ್ಗೆ ಮಾಹಿತಿ ನೀಡಿದ ಡಾ!! ಹರೀಶ್, ಚೇತನ್ ಕುಮಾರ್ ನವಿಲೆಹಾಳ್, ಅಪರೂಪದ ಕಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆ ಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮುಖಾಂತರ ಸರಿಪಡಿಸಿಸಲಾಗಿದೆ.

ತಲೆಬುರುಡೆಯ ಮೂಳೆಗಳ ಮಧ್ಯೆ ಸೂಚರ್ಸ್ (ಬಿರುಕುಗಳು) ಇರುತ್ತದೆ, ಈ ಬಿರುಕುಗಳು ಅವಧಿಗಿಂತ ಮುಂಚೆ ಕೂಡಿಕೊಂಡರೆ ಆ ಸಂದರ್ಭದಲ್ಲಿ ಬುರುಡೆಯ ಒಂದು ಭಾಗ ಸರಿಯಾಗಿ ಬೆಳವಣಿಗೆ ಆಗುವುದಿಲ್ಲ ಇದನ್ನೇ ಕ್ರೇನಿಯೊಸಿನೋಸ್ಟೋಸಿಸ್ ಎಂದು ಕರೆಯಲಾಗುತ್ತದೆ ಎಂದರು.

ಕ್ರೇನಿಯೊಸಿನೋಸ್ಟೋಸಿಸ್ ನಿಂದ ಮಗುವಿನ ತಲೆಬುರುಡೆ ವಿರೂಪವಾಗಿರುತ್ತದೆ. ಇದನ್ನು ನಿರ್ಲಕ್ಷ್ಯ ಮಾಡಿದರೆ ಕಣ್ಣಿನ ದೃಷ್ಟಿ ಹೋಗಬಹುದು, ಮೆದುಳಿನ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ ಅಥವಾ ಜೀವಕ್ಕೂ ಅಪಾಯವಾಗಬಹುದು.

ಶಿವಮೊಗ್ಗದಲ್ಲಿ ಇದೇ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆಯಾಗಿದ್ದು, ಯಶಸ್ವಿಯಾಗಿದೆ. ಇದು ಅತ್ಯಂತ ಕಠಿಣ ಮತ್ತು ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ, ಈ ಸರ್ಜರಿ ಗೆ ನರಶಸ್ತ್ರಚಿಕಿತ್ಸಾ ತಜ್ಞವೈದ್ಯರಿರಬೇಕು, ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞವೈದ್ಯರಿರಬೇಕು, ಮಕ್ಕಳ ಅರವಳಿಕೆ ತಜ್ಞ ವೈದ್ಯರಿರಬೇಕು, ಮಕ್ಕಳ ಐ.ಸಿ.ಯು ವ್ಯವಸ್ಥೆ ಇರಬೇಕು ಹಾಗಾಗಿ ಈ ಶಸ್ತ್ರಚಿಕಿತ್ಸೆಗೆ ಒಂದು ತಜ್ಞ ವೈದ್ಯರ ತಂಡ ಬೇಕಾಗುತ್ತದೆ.

ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡುವಂತಹ ಕೇಂದ್ರಗಳು ತುಂಬಾ ಕಡಿಮೆ ಇವೆ ಎಂದರು. ಈ ಶಸ್ತ್ರಚಿಕಿತ್ಸೆಯಲ್ಲಿ ನರಶಸ್ತ್ರಚಿಕಿತ್ಸಾ ತಜ್ಞವೈದ್ಯ ಡಾ!!.ಹರೀಶ್ ಮೆದುಳಿಗೆ ಯಾವುದೇ ರೀತಿ ಹಾನಿಯಾಗದಂತೆ ಮೆದುಳಿನ ಚಿಪ್ಪನ್ನು ಬೇರ್ಪಡಿಸಿ ಕೊಟ್ಟಿದ್ದಾರೆ.

ನಂತರ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞವೈದ್ಯ ಡಾ!!. ಚೇತನ್ ಕುಮಾರ್ ನವಿಲೆಹಾಳ್ ಅವರು ಆ ತಲೆ ಬುರುಡೆಯ ಚಿಪ್ಪಿನ ಆಕಾರವನ್ನು ಬದಲಾಯಿಸಿ ಸರಿಯಾದ ಆಕಾರಕ್ಕೆ ಬರುವಂತೆ ಸರಿಪಡಿಸಿ ಅಳವಡಿಸಿದ್ದಾರೆ.

ಮಕ್ಕಳ ಅರವಳಿಕೆ ತಜ್ಞ ವೈದ್ಯ ಡಾ!!.ಅರ್ಜುನ್ ಭಾಗವತ್ ಮಗುವಿಗೆ ಅನೆಸ್ತೇಶಿಯಾ ನೀಡಿ ಮಗುವಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲು ಸಹಕರಿಸಿದ್ದಾರೆ ಎಂದರು.

ಮಗುವಿಗೆ 8 ತಿಂಗಳು ಇರಬೇಕಾದರೆ ಪೋಷಕರು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಬಂದು ಮಕ್ಕಳ ತಜ್ಞ ವೈದ್ಯೆ ಡಾ!! ಕಾವ್ಯಾ ಅವರ ಬಳಿ ತೋರಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ.ಟಿ ಸ್ಕ್ಯಾನ್ ಮಾಡಿಸಲಾಗಿತ್ತು‌. ಈ ಸಿ.ಟಿ ಸ್ಕ್ಯಾನ್ ನಲ್ಲಿ ಮಗುವಿಗೆ ಕ್ರೇನಿಯೊಸಿನೋಸ್ಟೋಸಿಸ್ ಇರುವುದು ದೃಢಪಟ್ಟಿತ್ತು.

ಈ ಶಸ್ತ್ರ ಚಿಕಿತ್ಸೆಯ ಬಗ್ಗೆ ಮಗುವಿನ ಪೋಷಕರಿಗೆ ವಿವರಿಸಿದಾಗ ಅವರು ಕೂಡ ದೃಢ ಮನಸ್ಸಿನಿಂದ ಈ ಶಸ್ತ್ರಚಿಕಿತ್ಸೆಗೆ ಒಪ್ಪಿಕೊಂಡ ನಂತರ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದೇವೆ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ಮಗು ಕೂಡಾ ಆರೋಗ್ಯವಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X