ಶಿವಮೊಗ್ಗ | ಆಗುಂಬೆ ಭಾಗದಲ್ಲಿ ಕಾಳಿಂಗ ಸರ್ಪ ಸಂಶೋಧನಾ ಹೆಸರಿನಲ್ಲಿ ವಂಚನೆ: ತನಿಖೆಗೆ ಆದೇಶಿಸಿದ ಈಶ್ವರ್ ಖಂಡ್ರೆ

Date:

ಶಿವಮೊಗ್ಗ, ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆದೇಶಿಸಿದ್ದಾರೆ.

- Advertisement -

ಜನ ಸಂಗ್ರಾಮ ಪರಿಷತ್‌ನಿಂದ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡದಿಂದ ತನಿಖೆ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಕಾಳಿಂಗ ಸರ್ಪ ಸಂಶೋಧನೆ ಹೆಸರಲ್ಲಿ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದ (ಎಆರ್‌ಆರ್‌ಎಸ್‌) ವಂಚನೆ, ಕಾನೂನು ಉಲ್ಲಂಘನೆ ಬಗ್ಗೆ ಜನ ಸಂಗ್ರಾಮ ಪರಿಷತ್‌ ಅಧ್ಯಕ್ಷ ಅಖಿಲೇಶ್‌ ಚಿಪ್ಲಿ ಅವರು ಸಚಿವ ಈಶ್ವರ್ ಖಂಡ್ರೆ ಅವರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕಾಳಿಂಗ ಸರ್ಪ ಮತ್ತದರ ಮರಿಗಳ ವಿಡಿಯೋ ಅಂತಾರಾಷ್ಟ್ರೀಯ ವನ್ಯಜೀವಿ ಚಲನಚಿತ್ರದಲ್ಲಿ ಬಳಕೆ ಮಾಡುತ್ತಿದ್ದು, ಚಿತ್ರೀಕರಣದ ತುಣುಕಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಇದನ್ನೇ ಬಂಡವಾಳವಾಗಿ ಮಾಡಿಕೊಂಡು ಹಣದ ಆಸೆಗೆ ಸಂಶೋಧನಾ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ತಲ್ಲೂರು ಗ್ರಾಮದ ಸರ್ವೆ ನಂ.11ರ ಸೋಮೇಶ್ವರ ಅಭಯಾರಣ್ಯದ ಕೇಂದ್ರ ಭಾಗದಲ್ಲಿ ಆಗುಂಬೆಯ ಎಆರ್‌ಆರ್‌ಎಸ್‌ನವರು ಅಕ್ರಮವಾಗಿ ಜಮೀನು ಖರೀದಿಸಿದ್ದಾರೆ. ಯಾವುದೇ ಸಂಶೋಧನೆಗೆ ನಿರ್ದಿಷ್ಟ ಸಮಯಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ. ಆದರೆ, ಇಲ್ಲಿ ವರ್ಷವಿಡೀ ಸಂಶೋಧನೆ ಹೆಸರಲ್ಲಿ ಛಾಯಾಗ್ರಹಣ ನಡೆಸಲಾಗುತ್ತಿದೆ.

ಕಾಳಿಂಗ ಸರ್ಪಗಳ ಸೆರೆ, ರಕ್ಷಣೆ ಹೆಸರಲ್ಲಿ ಪರಿಶಿಷ್ಟರ ಮೇಲೆ ಆಗುತ್ತಿರುವ ಶೋಷಣೆ ಬಗ್ಗೆ ದೂರುದಾರರು ಪ್ರಸ್ತಾಪಿಸಿದ್ದರು.

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅರಣ್ಯ ಭೂಮಿ ಒತ್ತುವರಿ, ಕಟ್ಟಡ ನಿರ್ಮಾಣ, ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯೊಳಗೆ ಪರಿಸರ ಸೂಕ್ಷ್ಮ ಪ್ರದೇಶದ ಭೂಮಿ ಖರೀದಿ ಮಾಡಿರುವ ಗಂಭೀರ ಅಕ್ರಮಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದರು.

ಕಾಳಿಂಗ ಸರ್ಪಗಳ ಆವಾಸದಲ್ಲಿ ನಡೆಯುತ್ತಿರುವ ವಾಣಿಜ್ಯ ಚಟುವಟಿಕೆಗಳು, ಅರಣ್ಯ ಮತ್ತು ವನ್ಯಜೀವಿ ಕಾಯಿದೆಗಳ ನೇರ ಉಲ್ಲಂಘನೆ ಬಗ್ಗೆ ಉನ್ನತ ಮಟ್ಟದ ಪಾರದರ್ಶಕ ತನಿಖೆಗೆ ಮನವಿ ಮಾಡಿದ್ದರು.ಇತ್ತೀಚಿಗೆ ಕೊಡಗು ಸಮೀಪದಲ್ಲಿ ಅಕ್ರಮವಾಗಿ ಕಾಳಿಂಗ ಸರ್ಪ ಹಿಡಿದುಕೊಂಡು ವಿಡಿಯೋ, ಫೋಟೋ ಛಾಯಾಗ್ರಹಣ ಮಾಡುತ್ತಿದ್ದ ಮಹಾರಾಷ್ಟ್ರದ ಮೂವರ ಮೇಲೆ ಪ್ರಕರಣ ದಾಖಲಾಗಿದೆ.

ಇದು ಮಾಸುವ ಮುನ್ನವೇ ಆಗುಂಬೆಯ ಎ ಆರ್ ಆರ್ ಎಸ್ ಖಾಸಗಿ ಸಂಸ್ಥೆಯ ಸಿಬ್ಬಂದಿ ಅಕ್ರಮವಾಗಿ ಕಾಳಿಂಗ ಸರ್ಪ ಮತ್ತು ಮರಿಗಳನ್ನು ತಂದು ಇಟ್ಟುಕೊಂಡು ತಮ್ಮ ಜಾಗದಲ್ಲಿ ವನ್ಯಜೀವಿ ಛಾಯಾಗ್ರಾಹಕರಿಗೆ ಫೋಟೋ ವಿಡಿಯೋ ಶೂಟ್ ಮಾಡಲು ವ್ಯವಸ್ಥೆ ಮಾಡಿದೆ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...