ಶಿವಮೊಗ್ಗ | ಆನಂದಪುರದಿಂದ ಶಿಕಾರಿಪುರ, ಕೆಎಸ್‌ಆರ್‌ಟಿಸಿ ಬಸ್‌ಗೆ : ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

Date:

Advertisements

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರದ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ.

ಸಮೀಪದ ಬೈರಾಪುರದಲ್ಲಿ ಹೊಸ ಬಸ್‌ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಈ ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆ ಆರಂಭಿಸಬೇಕೆಂದು ಸಾರ್ವಜನಿಕರು ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೊಸ ಬಸ್ ಸೇವೆಯನ್ನು ಒದಗಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

1002258405

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 4,000 ಹೊಸ ಬಸ್‌ಗಳನ್ನು ಖರೀದಿಸಿದ್ದು, ಅವುಗಳಲ್ಲಿ 9 ಬಸ್‌ಗಳನ್ನು ಸಾಗರ ಘಟಕಕ್ಕೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಸಾಗರಕ್ಕೆ ಇನ್ನೂ 10 ಬಸ್‌ಗಳನ್ನು ನೀಡುವ ಭರವಸೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೀಡಿದ್ದಾರೆ ಎಂದು ಬೇಳೂರು ತಿಳಿಸಿದರು.

ಬೆಳೆ ಮತ್ತು ಮನೆಹಾನಿಯಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದ್ದು, ಅದು ಶೀಘ್ರದಲ್ಲೇ ಫಲಾನುಭವಿಗಳನ್ನು ತಲುಪಲಿದೆ.

1002258411

ಹಾಗೆಯೇ, ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಿಂದಾಗಿ ಮಹಿಳೆಯರಿಗೆ ರಾಜ್ಯದಾದ್ಯಂತ ಸಂಚರಿಸಲು ಬಹಳಷ್ಟು ಸಹಕಾರಿಯಾಗಿದೆ.

ಅದರಲ್ಲೂ ವಿಶೇಷವಾಗಿ ಧರ್ಮಸ್ಥಳದಂತಹ ಧಾರ್ಮಿಕ ಕೇಂದ್ರಗಳಿಗೆ ಪ್ರಯಾಣಿಸಲು ಸುಲಭವಾಗಿದೆ ಎಂದರು. ಸಾಗರ ಬಸ್ ಡಿಪೋದ ನವೀಕರಣಕ್ಕಾಗಿ 4 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X