ಶಿವಮೊಗ್ಗ | ಗಾಜನೂರು ತುಂಗಾ ಜಲಾಶಯದಲ್ಲಿ, ತುಂಗೆಗೆ ಬಾಗಿನ ಅರ್ಪಿಸಿದ : ಸಂಸದ ರಾಘವೇಂದ್ರ

Date:

ಶಿವಮೊಗ್ಗ ಮಲೆನಾಡು ಹಾಗೂ ಬಯಲುಸೀಮೆಯ ಮೂರು ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಾ ನದಿ ತುಂಬಿ ಹರಿಯುತ್ತಿದ್ದು, ಒಡಲು ತುಂಬಿರುವ ಹೊಳೆಗೆ ಸಂಸದ ಬಿ.ವೈ. ರಾಘವೇಂದ್ರ ಇಂದು ಬಾಗಿನ ಅರ್ಪಿಸಿದರು.

- Advertisement -

ಶಿವಮೊಗ್ಗ ಮತ್ತು ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಲಕ್ಷಾಂತರ ಹೆಕ್ಟ‌ರ್ ಪ್ರದೇಶಕ್ಕೆ ನೀರುಣಿಸುವ ರೈತರ ಜೀವನಾಡಿ ತನ್ನ ಜೀವಕಳೆ ಮರಳಿ ಪಡೆದುಕೊಂಡು ಮೈದುಂಬಿ ಹರಿಯುತ್ತಿರುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಜನೂರು ತುಂಗಾ ಜಲಾಶಯಕ್ಕೆ ಇಂದು ಭೇಟಿ ಕೊಟ್ಟು ಜನಪ್ರತಿನಿಧಿಗಳೊಂದಿಗೆ ಬಾಗಿನ ಅರ್ಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಂಸದರು, ಈ ವರ್ಷವೂ ಮಳೆರಾಯನ ಕೃಪೆಯಿಂದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ವರ್ಷಧಾರೆ ಧುಮ್ಮಿಕ್ಕಿದ ಪರಿಣಾಮ ಜಲಾಶಯ ತನ್ನ ನೈಜ ಸೊಬಗನ್ನು ಮರಳಿ ಪಡೆದುಕೊಂಡಿದೆ.

ಉಳುವ ಯೋಗಿಯ ಮೊಗದಲ್ಲಿ ಭಯದ ಕಾರ್ಮೋಡ ದೂರವಾಗಿ ಭರವಸೆಯ ಮಂದಹಾಸ ಮೂಡಿಸಿದ್ದು, ಈ ಸಾಲಿನಲ್ಲಿ ಭತ್ತ, ಆ ಸೇರಿದಂತೆ ಇನ್ನಿತರ ಬೆಳೆಗಳು ಉತ್ತಮ ಇಳುವರಿ ದೊರೆಯುವ ನಿರೀಕ್ಷೆ ಮೂಡಿದೆ ಎಂದಿದ್ದಾರೆ.

ಬಾಗಿನ ಅರ್ಪಿಸುವ ಸಂದರ್ಭದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಬಿಜೆಪಿ ಪ್ರಮುಖರಾದ ಜಗದೀಶ್, ಮೋಹನ್ ರೆಡ್ಡಿ, ಶಾಸಕರುಗಳಾದ ಎಸ್.ಎನ್‌. ಚನ್ನಬಸಪ್ಪ, ಡಿ.ಎಸ್‌. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ದತ್ತಾತ್ರಿ ಸೇರಿದಂತೆ ಅನೇಕ ಮುಖಂಡರು, ಹಿರಿಯರು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...