ಶಿವಮೊಗ್ಗ | ಗಾಂಜಾ ಆರೋಪಿಗಳಿಗೆ 3 ವರ್ಷ ಕಠಿಣ ಕರಾಗೃಹ ಶಿಕ್ಷೆ

Date:

ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ಘನ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂರು ವರ್ಷ ಕಠಿಣ ಸಜೆ ಹಾಗೂ ತಲಾ 25,000 ದಂಡ ಕಟ್ಟುವಂತೆ ಆದೇಶಿಸಿ ತೀರ್ಪು ನೀಡಿದೆ.

- Advertisement -

ದಿನಾಂಕ: 04-08-2021 ರಂದು ಅಶೊಕ್ ಕುಮಾರ್ ಪಿಐ ಸಾಗರ ಟೌನ್ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ ಅವರಿಂದ 1 ಕೆ.ಜಿ 60 ಗ್ರಾಂ ಒಣ ಗಾಂಜಾ ಪದಾರ್ಥ ಮತ್ತು 800/- ರೂ ನಗದು ಹಣ ಮತ್ತು ಗಾಂಜಾ ಮಾರಾಟ ಮಾಡಲು ಬಳಸಿದ ಮಾರುತಿ ಓಮಿನಿ ಕಾರ್ ಅನ್ನು ಅಮಾನತ್ತು ಪಡಿಸಿಕೊಂಡಿದ್ದು, ಆರೋಪಿತರ ವಿರುದ್ಧ ಸಾಗರ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0148/2021 ಕಲಂ NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಸಾಗರ್ ಕರ್ ಪಿಎಸ್ಐ ಸಾಗರ ಟೌನ್ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

1002376797

ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸುರೇಶ್ ಕುಮಾರ್ ಎ.ಎಂ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು ಘನ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀ ಮಂಜುನಾಥ ನಾಯಕ ರವರು ದಿನಾಂಕ: 08-10-2025 ರಂದು ಆರೋಪಿತರಾದ ಇಮ್ರಾನ್ ಖಾನ್, 25 ವರ್ಷ, ಸಾಗರ ಟೌನ್ ಮತ್ತು ಇಮ್ತಿಯಾಜ್, 28 ವರ್ಷ, ಸಾಗರ ಟೌನ್ ರವರುಗಳಿಗೆ 3 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 25,000/- ರೂ ದಂಡ ವಿಧಿಸಿ, ಆದೇಶಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...