ಶಿವಮೊಗ್ಗ | ಸೊರಬ ಗೋವು ಸಂರಕ್ಷಣೆಗೆ ಸರ್ಕಾರ ಬದ್ದ ; ಮಧು ಬಂಗಾರಪ್ಪ

Date:

Advertisements

ಗೋ ಸಂರಕ್ಷಣೆಗೆ ಸರ್ಕಾರ ಬದ್ಧ ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.

ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿರುವ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗ ಲಸಿಕೆ ಅಭಿಯಾನದ 7 ನೇ ಸುತ್ತಿನ ಪೋಸ್ಟರ್ ಅನ್ನು ಅನಾವರಣಗೊಳಿಸಿದ ನಂತರ, ಶ್ರೀ ಎಸ್. ಮಧು ಬಂಗಾರಪ್ಪ ಅವರು ಸಾರ್ವಜನಿಕರು ಉಚಿತ ಲಸಿಕೆ ಅಭಿಯಾನದ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗ ಎರಡರ ವಿರುದ್ಧ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಅಭಿಯಾನವನ್ನು ಬೆಂಬಲಿಸಬೇಕೆಂದು ಹೇಳಿದರು.

1001500214

“ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗಕ್ಕೆ ಒಳಗಾಗುವ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಭೇಟಿ ಲಸಿಕೆ ಹಾಕುತ್ತಾರೆ. ಅವರೊಂದಿಗೆ ಸಹಕರಿಸಿ ಮತ್ತು ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಈ ರೋಗಗಳಿಂದ ಗೋವುಗಳನ್ನು ರಕ್ಷಿಸಿ” ಗೋಗಳ ಸಂರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Advertisements

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದೆ. ಜಾನುವಾರು ಸಾಕಾಣಿಕೆ ದಾರರು ಎದುರಿಸಲು ಉಪಯೋಗಪಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಪಶುಪಾಲನ ಇಲಾಖೆಯ ಉಪ ನಿರ್ದೇಶಕರಾದ ಡಾ.ಬಾಬುರತ್ನ ಎ. ಉಪನಿರ್ದೆಶಕರು(ಆಡಳಿತ), ಡಾ.ವಿನಯಕುಮಾರ.ವೈ.ಎಲ್ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಡಾ.ಪ್ರದೀಪ ಕುಮಾರ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ಇವರು ಉಪಸ್ಥಿತರಿದ್ದರು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X