ಶಿವಮೊಗ್ಗ | ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಶಾಸನಬದ್ದ ತೀರ್ಮಾನವನ್ನು ತೆಗೆದುಕೊಳ್ಳಬೇಕು

Date:

Advertisements

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ತಾಯ್ತನ ತೋರಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಶಾಸನಬದ್ದ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸ ಕರ ರಾಜ್ಯ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಡಾ. ಸೋಮಶೇಖರ್ ಹೆಚ್. ಶಿಮೊಗ್ಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ದಲ್ಲಿ ಸುಮಾರು 11 ಸಾವಿರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿದ್ದಾರೆ. ಇವರಲ್ಲಿ 5620 ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಪಡೆದವರಿದ್ದಾರೆ. ಉಳಿದ 5353 ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಯನ್ನು ಪಡೆದಿಲ್ಲ. ಆದರೆ ಹತ್ತಾರು ವರ್ಷಗಳ ಕಾಲ ಇವರು ಭೋದನೆ ಮಾಡಿದ್ದಾರೆ.

ಲಕ್ಷಾಂತರ ವಿದ್ಯಾರ್ಥಿಗಳು ಇವರ ಪಾಠವನ್ನು ಪಡೆದು, ಉನ್ನತ ಹುದ್ದೆಗಳಲ್ಲಿ ಅವಕಾಶ ಪಡೆದಿದ್ದಾರೆ. ಈಗ ಇವರನ್ನು ಯುಜಿಸಿ ಅರ್ಹತೆ ಪಡೆದಿಲ್ಲ ಎಂಬ ಕಾರಣಕ್ಕೆ ಕೈ ಬಿಟ್ಟಿರುವುದು ಸರಿಯಲ್ಲ ಆದಕಾರಣ ಯಾವುದೇ ಕಾರಣಕ್ಕೂ ಅವರನ್ನು ಸೇವೆಯಿಂದ ಕೈ ಬಿಟ್ಟಿರುವುದು ಸರಿಯಲ್ಲ ಆದಕಾರಣ ಯಾವುದೇ ಕಾರಣಕ್ಕೂ ಅವರನ್ನು ಸೇವೆಯಿಂದ ಕೈ ಬಿಡಬಾರದು ಎಂದು ಆಗ್ರಹಿಸಿದರು.

ನ್ಯಾಯಾಲಯ ಕೂಡ ಒಬ್ಬ ತಾತ್ಕಾಲಿಕ ನೌಕರನ ಸ್ಥಾನವನ್ನು ಮತ್ತೊಬ್ಬ ತಾತ್ಕಾಲಿಕ ನೌಕರನು ಸ್ಥಳಾಂತರಿಸಲು ಅವಕಾಶ ಇಲ್ಲ ಎಂದು ತೀರ್ಪು ನೀಡಿದೆ. ಅತಿಥಿ ಉಪನ್ಯಾಸ ಕರು ತಮ್ಮನ್ನು ಸೇವೆಯಿಂದ ತೆರವು ಮಾಡದಂತೆ ಮಧ್ಯಂತರ ತಡೆಯಾಜ್ಞೆ ಕೂಡ ತಂದಿದ್ದಾರೆ ಎಂದ ಅವರು, ಜೊತೆಗೆ ಕಾಲೇಜು ಶಿಕ್ಷಣ ಇಲಾಖೆ ಯಾವುದೇ ಅತಿಥಿ ಉಪನ್ಯಾಸಕರನ್ನು ನೂತನ ಕಾಯಂ ನೇಮಕಾತಿ ಅಥವಾ ವರ್ಗಾವಣೆ ಸಂದರ್ಭದಲ್ಲಿ ಮತ್ತು ಕಾರ್ಯಭಾರದ ಕೊರತೆಯಾದ ಸಂದರ್ಭದಲ್ಲಿ ಮಾತ್ರ ಅತಿಥಿ ಉಪನ್ಯಾಸಕರ ಸ್ಥಾನವನ್ನು ತೆರವುಗೊಳಿಸಬಹುದು ಎಂದು ಹೇಳಿದೆ ಎಂದರು.

ಹಾಗಾಗಿ ಸರ್ಕಾರ 2025-26ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಯ ಬಿಕ್ಕಟ್ಟನ್ನು ಪ್ರಾರಂಭಿಕವಾಗಿಯೇ ಬಗೆಹರಿಸ ಬೇಕು. ಅತಿಥಿ ಉಪನ್ಯಾಸಕರನ್ನು ಉಳಿಸಿಕೊಳ್ಳಬೇಕು. ಇದಕ್ಕಾಗಿ ನೇಮಕಾತಿ ಬಿಕ್ಕಟ್ಟನ್ನು ನಿವಾರಿಸಲು ಶಾಸನಬದ್ದ ಮಾಡಬೇಕು. ಸಚಿವ ಸಂಪುಟದಲ್ಲಿ ಈ ಬಗ್ಗೆ ಸ್ಪಷ್ಟನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಮುಖ್ಯಸ್ಥರಾದ ನಟರಾಜ್ ಆರ್.ಟಿ., ಟಿ.ಹೆಚ್. ಹಾಲೇಶಪ್ಪ, ಪ್ರೊ. ರಾಚಪ್ಪ ಎಸ್.ವಿ. ರಾಜಮ್ಮ, ಈಸೂರು ಧನಂಜಯಪ್ಪ ಮಂಜುನಾಥ್ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X