ಶಿವಮೊಗ್ಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಅಮಿತ್ ಶಾ ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾದ ಎನ್.ಕೆ.ಜಗದೀಶ್ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ .
ಅಮಿತ್ ಶಾ ಅವರು ಮೇ 30, 2019 ರಿಂದ ಭಾರತದ ಗೃಹ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗೋವಿಂದ ವಲ್ಲಭ ಪಂತ್ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರ ದಾಖಲೆಗಳನ್ನು ಹಿಂದಿಕ್ಕಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ ಎಂದರು.
ಲಾಲ್ ಕೃಷ್ಣ ಅಡ್ವಾಣಿ ಅವರ 6 ವರ್ಷ 64 ದಿನಗಳ ಹಾಗೂ ಗೋವಿಂದ ವಲ್ಲಭ ಪಂತ್ ಅವರ 6 ವರ್ಷ 56 ದಿನಗಳ ದಾಖಲೆಯನ್ನು ಮುರಿದಿದ್ದಾರೆ.ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನ ಅವರ ಕೆಲವು ಗಮನಾರ್ಹ ಉಪಕ್ರಮಗಳಾಗಿವೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವಲ್ಲಿ ಶಾ ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದರು.

ಅಮಿತ್ ಶಾ ಅವರ ನಾಯಕತ್ವದಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಗಮನಾರ್ಹ ಇಳಿಕೆ ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ಹೆಚ್ಚಳ ಕಂಡುಬಂದಿದೆ.2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಹಾಗೂ ವಿವಿಧ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಅಮಿತ್ ಶಾ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ರಾಷ್ಟ್ರೀಯ ಭದ್ರತೆಯ ಮಹತ್ವವನ್ನು ಹೆಚ್ಚಿಸಿದ್ದಾರೆ, ದೇಶದ ಆಂತರಿಕ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕೇಂದ್ರದ ಗ್ರಹ ಸಚಿವರಾದ ಅಮಿತ್ ಶಾ ಅವರ ಸಾಧನೆಯು ಇಡೀ ದೇಶಕ್ಕೆ ಹೆಮ್ಮೆ ತರುವಂತದ್ದು ಇವರ ಸೇವೆಯು ಇನ್ನೂ ದೀರ್ಘಕಾಲ ದೇಶಕ್ಕೆ ದೊರಕುವಂತಾಗಲಿ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್ ಆಶಿಸಿದ್ದಾರೆ.