ಶಿವಮೊಗ್ಗ | ವಸತಿ ಹಂಚಿಕೆ ಭ್ರಷ್ಟಾಚಾರ ಆರೋಪ ; ಜಮೀರ್ ಅಹ್ಮದ್ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ; ಶಾಸಕ ಬೇಳೂರು ಗೋಪಾಲಕೃಷ್ಣ

Date:

ಶಿವಮೊಗ್ಗದಲ್ಲಿ ಇಂದು ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ.

- Advertisement -

ನಗರದಲ್ಲಿಂದು ಈ ಕುರಿತು ಮಾಧ್ಯಮದವರೂಂದಿಗೆ ಮಾತನಾಡಿದ ಅವರು, ವಸತಿ ಸಚಿವರ ವಿರುದ್ಧ ಮನೆ ಹಂಚಿಕೆ ವಿಚಾರದಲ್ಲಿ ಹಣ ಕೇಳಿದ್ದಾರೆಂಬ ಆರೋಪ‌ ಕೇಳಿ ಬಂದಿದೆ. ಇದರಿಂದ ವಸತಿ ಸಚಿವ ಜಮೀರ್​ ಅಹ್ಮದ್​ಖಾನ್​ ಅವರು ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಅವರು ಭ್ರಷ್ಟಾಚಾರ ಮಾಡಿಲ್ಲ ಎಂದು ಸಾಬೀತಾದರೆ ಮತ್ತೆ ತಮ್ಮ ಮಂತ್ರಿ ಸ್ಥಾನಕ್ಕೆ ಬರಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಹಿಂದೆ ಅನೇಕ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಾಗ ಅವರು ರಾಜೀನಾಮೆ ನೀಡಿದ್ದ ಉದಾಹರಣೆಗಳಿವೆ ಎಂದರು. ಇದರಿಂದ ವಸತಿ ಸಚಿವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎನ್ನುವ ಮೂಲಕ ಸ್ವಪಕ್ಷದವರೇ ವಸತಿ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.‌

ಶಾಸಕರ ಅನುದಾನಕ್ಕೆ ಕಮಿಷನ್ ಪಡೆಯುತ್ತಾರೆಂಬ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೋಪಾಲಕೃಷ್ಣ ಬೇಳೂರು ಅವರು, ಕುಮಾರಸ್ವಾಮಿ ಅವರ ಆರೋಪ ನನಗೆ ಗೊತ್ತಿಲ್ಲ. ನಾವು ಅನುದಾನ ತಂದಾಗ ಯಾರೂ ಸಹ ಕಮಿಷನ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ರೈತರಿಗೆ ಅತಿ ಅವಶ್ಯಕವಾದ ರಸಗೊಬ್ಬರದ ದರವನ್ನು ಪ್ರತಿ ಪ್ಯಾಕೇಟ್ ಮೇಲೆ 180 ರೂಪಾಯಿ ತನಕ ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಇದರಿಂದ ರೈತಾಪಿ ವರ್ಗಕ್ಕೆ ಹೊರೆಯಾಗಲಿದೆ. ಹಿಂದೆ ಹಾಲಿಗೆ ಕೇವಲ ಒಂದು ರೂಪಾಯಿ ಏರಿಕೆ ಮಾಡಿದಾಗ ಬಿಜೆಪಿಗರು ದೊಡ್ಡ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈಗ ಅವರೆಲ್ಲಾ ಯಾಕೆ ಸುಮ್ಮನಿದ್ದಾರೆ? ಎಂದು ಬೇಳೂರು ಪ್ರಶ್ನಿಸಿದರು.

ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಪರವಾಗಿ ಇದ್ದಾರೆ ಎಂದು‌ ಬಿಜೆಪಿ ನಾಯಕರು ಹೇಳುತ್ತಾರೆ. ದರ ಏರಿಕೆ‌ ಮಾಡುವುದೇ ರೈತರ ಪರವಾಗಿ‌ ಇರೋದಾ ಎಂದು ಅವರು ಕೇಳಿದರು.

ರಾಷ್ಟ್ರಧ್ವಜವನ್ನು ಕೇಸರಿ ಮಾಡಲು ಹೊರಟ ಬಿಜೆಪಿಯವರು ರಾಷ್ಟ್ರದ್ರೋಹಿಗಳು. ರಾಷ್ಟ್ರಧ್ವಜ ಹಾಗೂ ಸಂವಿಧಾನ ಬದಲು ಮಾಡಬೇಕು ಎನ್ನುವವರನ್ನು ನೇಣಿಗೆ ಹಾಕಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...