ಶಿವಮೊಗ್ಗ | ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ಈ ಬಾರಿ ಎಷ್ಟು ಸಿಸಿ.ಟಿವಿ? ಏನು ವೈಶಿಷ್ಟ್ಯತೆ?

Date:

Advertisements

ಶಿವಮೊಗ್ಗ ನಗರದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು ಯಾವುದೇ ಘಟನೆ ಜರುಗಿದರೆ ಕೂಡಲೇ ಪತ್ತೆ ಹಚ್ಚುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಈಗಾಗಲೇ 1000 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

1002140800

ಸಿಸಿಟಿವಿ ಕ್ಯಾಮೆರಾಗಳನ್ನು ಈಗಾಗಲೇ ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಅಳವಡಿಸಲಾಗಿದೆ. ಸಿಸಿ ಟಿವಿ ಕ್ಯಾಮೆರಾಗಳು ಹೆಚ್ಚಿನ ದೂರದವರೆಗೆ ಸ್ಪಷ್ಟವಾದ ರೀತಿಯಲ್ಲಿ ಕವರೇಜ್ ಹೊಂದಿದ್ದು, ಸಣ್ಣ ಪುಟ್ಟ ಚಲನವಲನ ಹಾಗೂ ಚಟುವಟಿಕೆಯನ್ನು ಸಹ ರೆಕಾರ್ಡ್ ಮಾಡಿಕೊಳ್ಳುತ್ತದೆ.

ಹಾಗೂ ಕ್ಯಾಮರಾಗಳು ಮೈಕ್ ಏನೇಬಲ್ಡ್ ವೈಶಿಷ್ಟ್ಯ ಹೊಂದಿದ್ದು, ಅದರ ಮೂಲಕ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಬಹುದಾಗಿದೆ.

ಸಿಸಿ ಟಿವಿ ಕ್ಯಾಮೆರಾಗಳ ಫೂಟೇಜ್ ಅನ್ನು ಪೊಲೀಸ್ ಇಲಾಖೆಯು ಲೈವ್ ಸ್ಟ್ರೀಮಿಂಗ್ ಮುಖಾಂತರ ನೋಡಲಿದ್ದು, ಸದರಿ ಫೂಟೇಜ್ ಗಳನ್ನು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಹಾಗೂ ಬೀಟ್ ಸಿಬ್ಬಂದಿಗಳು ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಕಂಟ್ರೋಲ್ ರೂಂನಲ್ಲಿಯೂ ಸಹ ಮಾನಿಟರಿಂಗ್ ಮಾಡಲಾಗುತ್ತಿದೆ.

ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಮೂಲಕ ಪೊಲೀಸ್ ಇಲಾಖೆಯು ಎಲ್ಲರ ಚಲನ ವಲನದ ಮೇಲೆ ಸೂಕ್ತ ನಿಗವಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X