ಜಮ್ಮು & ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರರ ದಾಳಿಯಲ್ಲಿ ಮೃತರಾದಂತಹ ಶಿವಮೊಗ್ಗದ ನಿವಾಸಿ ಮಂಜುನಾಥ್ ರಾವ್ ರವರ ಮನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರು ಭೇಟಿ ಕೊಟ್ಟು ಅವರ ಪತ್ನಿ, ಮಗ, ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಮಾತನಾಡಿಜಮ್ಮು & ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಖಂಡನೀಯ. ಈ ದಾಳಿಯಲ್ಲಿ 27ಜನ ಮೃತಪಟ್ಟಿದ್ದಾರೆ. ಇದರಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್ ಕೂಡ ಮೃತಪಟ್ಟಿದ್ದಾರೆ.
ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಜಮ್ಮು & ಕಾಶ್ಮೀರ ಪ್ರವಾಸಿಗರ ಮೇಲೆ ಹೆಚ್ಚು ಅವಲಂಬಿತವಾಗಿರುವ ಪ್ರದೇಶ. ಆದರೆ ಇಂತಹ ಘಟನೆಗಳಿಂದ ಪ್ರವಾಸಿಗರು ಭಯ ಪಡುವಂತಾಗಿದೆ.
ಕೇಂದ್ರ ಸರ್ಕಾರ ಈ ದಾಳಿಯನ್ನು ಮಾಡಿದ ಉಗ್ರರರಿಗೆ ತಕ್ಕ ಪಾಠ ಕಲಿಸಬೇಕು ಮತ್ತು ಇನ್ನೊಮ್ಮೆ ಇಂತಹ ಘಟನೆಗಳು ನಡೆಯದಂತೆ ಉಗ್ರರರನ್ನು ಸದೆ ಬಡಿಯುವ ಕೆಲಸ ಮಾಡಬೇಕು ಜಮ್ಮು & ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆಯನ್ನ ನಿಯೋಜಿಸಬೇಕೆಂದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇವಪ್ಪ, ಭದ್ರಾವತಿ ತಾ|| ಪ್ರಧಾನ ಕಾರ್ಯದರ್ಶಿ ಸಿ.ಎಸ್ ಹನುಮಂತಪ್ಪ, ಉಪಾಧ್ಯಕ್ಷರಾದ ಮಂಜಪ್ಪ ಮೊದಲಾದವರು ಉಪಸ್ಥಿತರಿದ್ದರು.