ಶಿವಮೊಗ್ಗ | “ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳೊಳಗೆ ನಿಮಗೆ ಡಿಟೈಲ್ ಹೇಳುವೆ ” ; ಮಧು ಬಂಗಾರಪ್ಪರ ವೈರಲ್ ವಿಡಿಯೋ ಅಸಲಿಯತ್ತೇನು? ಎಸ್ಪಿಗೆ ದೂರು

Date:

Advertisements

ಶಿವಮೊಗ್ಗ ಜಿಲ್ಲಾ ಈಡಿಗರ ಸಂಘ ಮತ್ತು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಗೆ ಮನವಿ ಸಲ್ಲಿಸಿದರು.

ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ ಮೂಡಿಸಿ, ಶಾಂತಿಭಂಗ ಮಾಡಲು ಹೊರಟವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.

1001945142

21ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ಭೇಟಿಯ ನೀಡಿದ್ದರು.

Advertisements

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿರುವಾಗ, ಮಾಧ್ಯಮ ಪ್ರತಿನಿಧಿಗಳು ಸಿಗಂಧೂರು ಸೇತುವೆ ವಿಷಯವಾಗಿ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಸುವಾಗ, ಸಿಗಂಧೂರು ದೇವಸ್ಥಾನವನ್ನು ಯಾರು ಹಾಳು ಮಾಡಲು ಪ್ರಯತ್ನಿಸಿದರು ಎಂಬುದನ್ನು ಒಂದು ತಿಂಗಳಲ್ಲಿ ಹೇಳುತ್ತೇನೆ ಎಂದು ಮಾದ್ಯಮದವರ ಮುಂದೆ ನೀಡಿದ ಹೇಳಿಕೆಯನ್ನು ಬಿಜೆಪಿಯ ಸೋಶಿಯಲ್ ಮೀಡಿಯಾ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಅರ್ದಕ್ಕೆ ಕತ್ತರಿಸಿ, “ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳೊಳಗೆ ನಿಮಗೆ ಡಿಟೈಲ್ ಹೇಳುವೆ ” ಎಂಬ 19 ಸೆಕೆಂಡ್ ವಿಡಿಯೋವನ್ನು ಮಾಡಿ ಅದರ ಕೆಳಗಡೆ ಅಜ್ಞಾನಿ ವಿದ್ಯಾ ಮಂತ್ರಿಗಳೇ ಸಿಗಂದೂರು ಚೌಡೇಶ್ವರಿ ಮಾತೆಯಮಂದಿರ ಹಾಳು ಮಾಡ್ತೀವಿ ಎಂದ ನಾಲಿಗೆಗೆ ತಾಯಿ ಬರೆ ಹಾಕುವುದು ನಿಶ್ಚಿತ, ಎಂದು ದೇವರ ಚಿತ್ರದೊಂದಿಗೆ ಬರೆದ ವಿಡಿಯೋ ವೈರಲ್ ಮಾಡಿದ್ದಾರೆ.

ಈ ರೀತಿ ಹೇಳಿಕೆಯನ್ನು ತಿರುಚಿರುವುರೊಂದಿಗೆ ಜನರಲ್ಲಿ ಧಾರ್ಮಿಕ ಭಾವನೆಯನ್ನು ಕೆರಳಿಸಿ ಮಂತ್ರಿಗಳ ಬಗ್ಗೆ ದ್ವೇಷ ಭಾವನೆ ಮೂಡುವಂತೆ ಪ್ರಚೋದಿಸಿ. ಜನರನ್ನು ಉದ್ರೆಕಗೊಳಿಸಿ ಸಮಾಜದಲ್ಲಿ ಅಶಾಂತಿ ಮೂಡಿಸಿ ಸಂಘರ್ಷ ಏರ್ಪಡಿಸುವ ಉದ್ದೇಶ ಹೊಂದಿರುವ ಬಿಜೆಪಿ ಕಾರ್ಯಕರ್ತರು ಸೋಶಿಯಲ್ ಮೀಡಿಯಾದ ಈ ವಿಡಿಯೋವನ್ನು ವೈರಲ್ ಮಾಡಿದ್ದು, ಮಂತ್ರಿಗಳನ್ನು ಗೌರವಿಸುತ್ತಿದ್ದ ಸಮಾಜದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಿಂದ ಧಾರ್ಮಿಕ ಭಾವನೆಗೆ ದಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ಜನ ತಪ್ಪು ಭಾವನೆ ಮೂಡುವಂತೆ ಸಾರ್ವಜನಿಕರನ್ನು ಉದ್ರಿಕಿಸುವಂತೆ ಪ್ರಚೋದಿಸುತ್ತಿದ್ದಾರೆ.

ಈ ಹಿಂದಿನ ಸರ್ಕಾರವು ಸಿಗಂಧೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸಲು ಹುನ್ನಾರ ನೆಡೆಸಿದ್ದನ್ನು ಹಾಗೂ ಆಡಳಿತ ಮಂಡಳಿಗೆ ನೀಡಿದ್ದ ಕಿರುಕುಳ, ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿಪಡಿಸಿರುವುದನ್ನು ಖಂಡಿಸಿ “ಶ್ರೀ ಸಿಗಂಧೂರು ಕ್ಷೇತ್ರ ಹೋರಾಟ ಸಮಿತಿ ರಚಿಸಿ” ಮಧು ಬಂಗಾಪ್ಪನವರು ಹಿಂದಿನ ಸರ್ಕಾರಕ್ಕೆ ಎಚ್ಚರಿಕೆಯನ್ನು, ನೀಡಿ ಸಿಗಂಧೂರು ದೇವಸ್ಥಾನ ಬಹುಸಂಖ್ಯಾತ ಈಡಿಗ ಸಮಾಜದ ಅಸ್ಮಿತೆ, ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಸರ್ಕಾರ ಮುಜರಾಯಿಗೆ ಸೇರಿಸುವ ಹುನ್ನಾರ ಕೈಬಿಡದಿದ್ದರೆ ಜೇನು ಗೂಡಿಗೆ ಕೈ ಹಾಕಿದಂತೆ ಎಂದು ಎಚ್ಚರಿಸಿ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು.

IMG20250723124901 01
oplus_0

ಅಂದಿನಿಂದ ಪ್ರತಿಹಂತದಲ್ಲು ಶ್ರೀ ಕ್ಷೇತ್ರದ ವಿಷಯವಾಗಿ ಸಲ್ಲದ ಸುಳ್ಳುಸುದ್ದಿ ಹರಡುವ ಕುತಂತ್ರ ರಾಜಕಾರಣ ಮಾಡುತ್ತಿದ್ದು, ಈ ನಕಲಿ ವೀಡಿಯೊ ಸೃಷ್ಠಿ ಇದರ ಭಾಗವಾಗಿದೆ.ಈ ರೀತಿಯ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡಿ ಶಾಂತಿಭಂಗವಾಗುವ ಸಾದ್ಯತೆಗಳಿರುವುದರಿಂದ, ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪನವರ ಹೇಳಿಕೆಯನ್ನು ತಿರುಚಿರುವವರ ಮೇಲೆ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಈ ಮೂಲಕ ಕೋರುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X