ಶಿವಮೊಗ್ಗ | ಶರಾವತಿ ಯೋಜನೆಗೆ ಮುಂದಾದರೆ, ನನ್ನ ಎದೆಯ ಮೇಲೆ ಜೆಸಿಬಿ ಹಾದುಹೋಗಲಿ: ಬಂಗಾರಮಕ್ಕಿ ಮಾರುತಿ ಗುರೂಜಿ

Date:

ಮಲೆನಾಡು ಹಾಗೂ ಕರಾವಳಿ ಪ್ರದೇಶದ ಜನರ ತೀವ್ರ ವಿರೋಧದ ನಡುವೆಯೂ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆ ಅನುಷ್ಠಾನಗೊಳಿಸಲು ಮುಂದಾದರೆ ಕಾಮಗಾರಿಗೂ ಮೊದಲು ಜೆಸಿಬಿ ಯಂತ್ರ ನನ್ನ ಎದೆಯ ಮೇಲೆ ಹಾದು ಹೋಗಬೇಕು ಎಂದು ಶಿವಮೊಗ್ಗ ಜಿಲ್ಲೆಯ ಗೇರುಸೊಪ್ಪದ ಬಂಗಾರಮಕ್ಕಿ ಕ್ಷೇತ್ರದ ಮಾರುತಿ ಗುರೂಜಿ ಎಚ್ಚರಿಸಿದರು.

- Advertisement -

ಸಾಗರ ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತ ಸಂಘ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಅಯೋಜಿಸಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರ-ಹದಲ್ಲಿ ಗುರುವಾರ ಭಾಗಿಯಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
1002370046
oplus_0

‘ಶರಾವತಿ ಮುಳುಗಡೆ ಸಂತ್ರಸ್ತರಿಗೆ ಏಳು ದಶಕಗಳ ನಂತರವೂ ನ್ಯಾಯ ಒದಗಿಸದ ಸರ್ಕಾರ ಈಗ ಮತ್ತೊಂದು ಯೋಜನೆಯ ಅನುಷ್ಠಾನಕ್ಕೆ ಮುಂದಾಗಿದೆ. ಜನರ ಭಾವನೆಗಳಿಗೆ ಸರ್ಕಾರ ಬೆಲೆ ಕೊಡದಿದ್ದರೆ ನೇಪಾಳ ಮಾದರಿಯ ಹೋರಾಟ ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಸಿದರು.

‘ಯೋಜನೆಗಾಗಿ ನೂರಾರು ಅಡಿ ಸುತ್ತಳತೆಯ ಸುರಂಗ ಮಾರ್ಗ ಕೊರೆದರೆ ಗುಡ್ಡ ಕುಸಿಯುವ ಸಾಧ್ಯತೆಯಿದೆ. ಸುರಂಗ ತೆಗೆದಾಗ ಹೊರಬರುವ 20 ದಶಲಕ್ಷ ಟನ್‌ಗಿಂತ ಹೆಚ್ಚಿನ ಪ್ರಮಾಣದ ಮಣ್ಣು ಹಾಕಲು ಗೇರುಸೊಪ್ಪ, ನಗರ ಬಸ್ತಿ ಸೇರಿ ಎಂಟು ಕಡೆ ಸ್ಥಳ ಗುರುತಿಸಲಾಗಿದೆ. ಈ ಮಣ್ಣು ಶರಾವತಿ ನದಿ ಪಾತ್ರ ಸೇರಿದರೆ ನದಿಯ ಅಸ್ತಿತ್ವಕ್ಕೆ ಅಪಾಯ ಉಂಟಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ನ್ಯಾಯಾಲಯ ಈಗಾಗಲೇ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡಿದೆ ಎಂದು ತಪ್ಪು ಮಾಹಿತಿ ನೀಡುತ್ತಿದೆ. ಮಾಹಿತಿ ಹಕ್ಕಿನ ಕಾಯ್ದೆಯಡಿ ಅರ್ಜಿ ಸಲ್ಲಿಸಿದರೂ ಯಾವುದೇ ಮಾಹಿತಿ ನೀಡುತ್ತಿಲ್ಲ. ಟೆಂಡರ್ ಕರೆದ ನಂತರ ಸಾರ್ವಜನಿಕರ ಅಹವಾಲು ಕೇಳುವ ಶಾಸ್ತ್ರಕ್ಕೆ ಸರ್ಕಾರ ಮುಂದಾಗಿದೆ’ ಎಂದು ಟೀಕಿಸಿದರು.

1002370815
oplus_0

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಶಿರವಾಳ, ಪ್ರಮುಖರಾದ ಅಖಿಲೇಶ್ ಚಿಪ್ಪಳಿ, ತೀ. ನ.ಶ್ರೀನಿವಾಸ್, ಮಲ್ಲಿಕಾರ್ಜುನ ಹಕ್ರೆ, ರಮೇಶ್ ಕೆಳದಿ, ಭದ್ರೇಶ್ ಬಾಳಗೋಡು, ಚಕ್ರವಾಕ ಸುಬ್ರಮಣ್ಯ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...

ಉಡುಪಿ | ದಲಿತರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ಸಂಜೀವ ಬಳ್ಕೂರು

ದಲಿತರ ಹಕ್ಕು, ಸಮಸ್ಯೆ ಹಾಗೂ ನ್ಯಾಯಕ್ಕಾಗಿ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟನೆಯೇ...