ಶಿವಮೊಗ್ಗ | ಸಿದ್ದರಾಮಯ್ಯಗೆ ಕಳಕಳಿ ಇದ್ದರೆ ಕುರುಬರಿಗೆ ಎಸ್‌.ಟಿ. ಮೀಸಲಾತಿ ಕಲ್ಪಿಸಲಿ : ಕೆ. ಎಸ್. ಈಶ್ವರಪ್ಪ

Date:

ಶಿವಮೊಗ್ಗ, ಹಿಂದುಳಿದ ಜನಾಂಗದ ನಾಯಕ ನಾನೇ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರಿಗೆ ನಿಜವಾಗಿಯೂ ಸಮಾಜದ ಮೇಲೆ ಕಳಕಳಿ ಇದ್ದರೆ ಕುರುಬರಿಗೆ ಎಸ್‌.ಟಿ. ಮೀಸಲಾತಿ ಕಲ್ಪಿಸಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.

- Advertisement -

ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜವಾಗಲೀ ಇನ್ನಾವುದೇ ಹಿಂದುಳಿದ ಸಮಾಜವಾಗಲೀ ಈಗ ಅವರು ಪಡೆಯುತ್ತಿರುವ ಎಸ್.ಟಿ. ಮೀಸಲಾತಿಯಲ್ಲಿ ಪಾಲು ಕೇಳುವುದಾಗಲೀ ಅಥವಾ ಅವರ ಹಕ್ಕನ್ನು ಕಿತ್ತುಕೊಳ್ಳುವುದಾಗಲಿ ನಮ್ಮ ಉದ್ದೇಶವಲ್ಲ. ಈಗಿರುವ ಎಸ್.ಟಿ. ಮೀಸಲಾತಿಯನ್ನು 20% ವರೆಗೆ ವಿಸ್ತರಿಸಿ ಅದರಲ್ಲಿ ಕುರುಬ ಸಮಾಜಕ್ಕೆ ಹಾಗೂ ಇನ್ನಿತರೆ ಯಾವುದೇ ಹಿಂದುಳಿದ ಜಾನಾಂಗವಿರಲಿ ಅವರಿಗೂ ಮೀಸಲಾತಿಯನ್ನು ಒದಗಿಸಬೇಕೆಂಬುದು ನಮ್ಮ ಬೇಡಿಕೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕುರುಬ ಸಮಾಜವನ್ನು ಎಸ್.ಟಿ. ವರ್ಗಕ್ಕೆ ಸೇರಿಸಬೇಕೆಂಬ ನಿಟ್ಟಿನಲ್ಲಿ ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮಿಗಳ ನೇತೃತ್ವದಲ್ಲಿ ನಾವೆಲ್ಲರೂ ದೆಹಲಿಗೆ ನಿಯೋಗವನ್ನು ಕೊಂಡೊಯ್ದು ಕೇಂದ್ರ ಸಚಿವರನ್ನು ಹಾಗೂ ಅನೇಕ ಮುಖಂಡರುಗಳನ್ನು ಬೇಟಿಯಾಗಿ ಸಮಾಜವನ್ನು ಎಸ್.ಟಿ. ವರ್ಗಕ್ಕೆ ಸೇರ್ಪಡೆಗೊಳಿಸುವ ಸಲುವಾಗಿ ಒತ್ತಡ ತಂದಿದ್ದೆವು.

ನಂತರ ಈ ಹೋರಾಟ ತನ್ನ ತೀವ್ರತೆಯನ್ನು ಪಡೆದುಕೊಂಡಿದ್ದು 2021 ರಲ್ಲಿ. ಆಗ ಕಾಗಿನೆಲೆ ಕನಕ ಗುರುಪೀಠದ ಮಹಾಸ್ವಾಮಿಗಳ ನೇತೃತ್ವದಲ್ಲಿ ಎಸ್‌.ಟಿ. ಹೋರಾಟ ಸಮಿತಿಯಡಿಯಲ್ಲಿ ನಾನು, ಹಾಗೂ ಹೆಚ್.ಎಮ್.ರೇವಣ್ಣ, ಬಂಡೆಪ್ಪ ಕಾಶಂಪುರ್, ಕೆ. ವಿರೂಪಾಕ್ಷಪ್ಪ, ಮುಕುಂದಪ್ಪ, ಕೆ.ಈ.ಕಾಂತೇಶ್, ಹೆಚ್.ವಿಶ್ವನಾಥ್ ಇನ್ನೂ ಮುಂತಾದ ಸಮಾಜದ ಮುಖಂಡರು ಹಾಗೂ ಹಲವು ಕುರುಬ ಸಮಾಜದ ಸಂಘಟನೆಗಳು ಪಾಲ್ಗೊಂಡು ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಸುಮಾರು 350 ಕಿ.ಮೀ. ಗೂ ಹೆಚ್ಚು ದೂರ ಪಾದಯಾತ್ರೆ ಕೈಗೊಂಡಿದ್ದೆವು. ಬೆಂಗಳೂರಿನಲ್ಲಿ 10 ಲಕ್ಷಕ್ಕೂ ಹೆಚ್ಚು ಸಮಾಜದ ಜನರನ್ನು ಸೇರಿಸಿ ಬೃಹತ್ ಸಮಾವೇಶವನ್ನು ಆಯೋಜಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ಮಾಡಿದ್ದೆವು.

ಇದರ ಪರಿಣಾಮವಾಗಿ ಆಗಿನ ಮುಖ್ಯಮಂತ್ರಿ ಬೊಮ್ಮಾಯಿಯವರು ಈ ವಿಷಯವನ್ನು ಸಂಪುಟ ಸಭೆಯಲ್ಲಿ ಅಂಗೀಕರಿಸಿ ಆದೇಶ ಹೊರಡಿಸಿದರು . ತದನಂತರ ಬಂದ ಕಾಂಗ್ರೇಸ್ ನೇತೃತ್ವದ ರಾಜ್ಯಸರ್ಕಾರ ಇದೇ ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡಿತು ಎನ್ನುವುದನ್ನು ನೆನಪಿಸಿದರು.

ಈಗ ಕೇಂದ್ರ ಸರ್ಕಾರವು ಕುರುಬ ಸಮಾಜವನ್ನು ಎಸ್.ಐ. ವರ್ಗಕ್ಕೆ ಸೇರಿಸುವ ಕುರಿತಾಗಿ ಕೆಲವು ದಾಖಲೆಗಳನ್ನು ಕೇಳುತ್ತಿದೆ ಎಂಬ ಮಾಹಿತಿ ಇದೆ. ಅದಕ್ಕಾಗಿ ಈಗಾಗಲೇ ತಜ್ಞರ ಸಮಿತಿಯು ಕುಲಶಾಸ್ತ್ರೀಯ ಅಧ್ಯಯನವನ್ನು ಕೈಗೊಂಡು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಕುರುಬ ಸಮಾಜವು ಈ ದೇಶದ ಮೂಲ ನಿವಾಸಿಗಳೆಂದು ಇವರಲ್ಲ ಹಲವರು ಕಡು ಬಡವ, ತುಳಿತಕ್ಕೊಳಗಾದ ಜನರಿದ್ದಾರೆಂದು ತಿಳಿಸಿದೆ.

ಅದರಲ್ಲೂ ಉತ್ತರ ಕರ್ನಾಟಕ ಬಾಗದಲ್ಲಿ ಕುರುಬ ಸಮಾಜವು ಅತ್ಯಂತ ಹಿಂದುಆದ ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಬಹಳ ಶೋಚನೀಯ ಸ್ಥಿತಿಯಲ್ಲಿದೆ ಎಂದರು. ಸಿದ್ದರಾಮಯ್ಯ ಕುರುಬ ನಾಯಕನೆಂದು ಅಂಜತನಾಗಲು ಹೊರಟಿದ್ದಾರೆ. ಇಲ್ಲಿಯವರೆಗೂ ಸಮಾಜಕ್ಕೆ ಒಳಿತು ಮಾಡುವುದನ್ನು ಬಿಟ್ಟು ಓಲೈಕೆ ರಾಜಕಾರಣವನ್ನು ಮಾಡಿಕೊಂಡು ಬೆಳೆದಿದ್ದಾರೆ. ಈಗಲಾದರೂ ಈ ಹೋರಾಟಕ್ಕೆ ಕೈಜೋಡಿಸಿ ಕುರುಬ ಸಮಾಜಕ್ಕೆ ಕಿಂಚಿತ್ತಾದರೂ ಋಣಿಯಾಗಬೇಕೆಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...