ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಕೊಡುವ ಸಮಾಜ ಘಾತುಕರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಐಜಿಪಿ ಡಾ. ಬಿ ಆರ್ ರವಿಕಾಂತೆಗೌಡ ಸೂಚಿಸಿದರು.
ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ಸಭೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ, ಸಂಜೀವ್ ಕುಮಾರ್. ಟಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ, ಗೋಪಾಲಕೃಷ್ಣ ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ, ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ, ಅರವಿಂದ್ ಕಲಗುಜ್ಜಿ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ, ಕೃಷ್ಣಮೂರ್ತಿ, ಪೊಲೀಸ್ ಉಪಾಧೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ, ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ