ಶಿವಮೊಗ್ಗ | ಧರ್ಮಸ್ಥಳ ಪ್ರಕರಣವನ್ನು ಕೂಡಲೇ SIT ತನಿಖೆಗೆ ವಹಿಸಿ : SDPI ಆಗ್ರಹ

Date:

ಶಿವಮೊಗ್ಗ, ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆದಿವೆ ಎನ್ನಲಾದ ಆರೋಪಗಳಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಕೂಡಲೇ ವಿಶೇಷ ತನಿಖಾ ದಳ (SIT) ರಚಿಸಿ ತನಿಖೆ ನಡೆಸಬೇಕು ಎಂದು ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಶಿವಮೊಗ್ಗ ಜಿಲ್ಲಾ ಸಮಿತಿ ಇಂದು ಆಗ್ರಹಿಸಿದೆ.

- Advertisement -

ಈ ಸಂಬಂಧ, SDPI ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವವಹಿಸಿದ್ದ SDPI ಜಿಲ್ಲಾಧ್ಯಕ್ಷ ಮೊಹಮ್ಮದ್ ಜೀಲನ್ ಖಾನ್ ಮಾತನಾಡಿ, ಧರ್ಮಸ್ಥಳದಲ್ಲಿ ಕಳೆದ ನಾಲ್ಕು ದಶಕಗಳಿಂದ ನೂರಕ್ಕೂ ಹೆಚ್ಚು ಹೆಣ್ಣು ಮಕ್ಕಳ ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯೊಬ್ಬ ಸಾಕ್ಷಿ ಸಮೇತ ದೂರು ನೀಡಿದ್ದಾರೆ. ಆದರೂ ರಾಜ್ಯ ಸರ್ಕಾರ ಈ ಪ್ರಕರಣವನ್ನು ತನಿಖೆ ಮಾಡಲು ಹಿಂದೇಟು ಹಾಕುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ರಾಜ್ಯ ಸರ್ಕಾರದ ಈ ನಡೆ ರಾಜ್ಯದ ಜನತೆಯಲ್ಲಿ ಅನುಮಾನ ಮೂಡಿಸಿದೆ” ಎಂದು ಆತಂಕ ವ್ಯಕ್ತಪಡಿಸಿದರು. “ಆದಷ್ಟು ಬೇಗ ರಾಜ್ಯ ಸರ್ಕಾರ ಮತ್ತು ರಕ್ಷಣಾ ಇಲಾಖೆ ಈ ಪ್ರಕರಣವನ್ನು SIT ಗೆ ವಹಿಸುವ ಮೂಲಕ ಅಪರಾಧಿಗಳಿಗೆ ಕಾನೂನಾತ್ಮಕ ಶಿಕ್ಷೆಯನ್ನು ಕೊಡಿಸಬೇಕಾಗಿದೆ” ಎಂದು ಅವರು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ SDPI ಜಿಲ್ಲಾಧ್ಯಕ್ಷ ಮೊಹಮ್ಮದ್ ಜೀಲನ್ ಖಾನ್ ಅವರೊಂದಿಗೆ ಉಪಾಧ್ಯಕ್ಷ ಸಲೀಂ ಖಾನ್, ಜಿಲ್ಲಾ ಸಮಿತಿ ಸದಸ್ಯರಾದ ಇಸಾಕ್ ಅಹ್ಮದ್, ಮನ್ಸೂರ್ ಖಾನ್, ಝಮೀರ್ ಮತ್ತು ನಗರಾಧ್ಯಕ್ಷರಾದ ಮುರ್ ಅಹ್ಮದ್ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಶಿವಮೊಗ್ಗ | ಜಿಪಂ, ತಾಪಂ ಮೀಸಲಾತಿ ಕರಡು ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಸಲು ಅ. 19 ಕೊನೆಯ ದಿನಾಂಕ

ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...