ಶಿವಮೊಗ್ಗ | ದಸರಾ ಪೂರ್ವಭಾವಿ ಸಭೆಯಲ್ಲಿ ; ಶಾಸಕರಿಂದ ಸಲಹೆ

Date:

ಶಿವಮೊಗ್ಗ, 9 ದಿನಗಳ ಕಾಲ ನಡೆಯುವ ದಸರಾದಲ್ಲಿ ಕಳೆದ ವರ್ಷ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.

- Advertisement -

’ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉದ್ಘಾಟಕರು, ಅತಿಥಿಗಳು, ರಂಗ ಸೇರಿ ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಮಾಡಬೇಕು. ಜಂಬೂ ಸವಾರಿಗಾಗಿ ಆನೆಗಳನ್ನು ಕರೆತರುವುದರ ಆದಿಯಾಗಿ ಅದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ರಾಜ್ಯದಲ್ಲಿಯೇ ಶಿವಮೊಗ್ಗ ದಸರಾಕ್ಕೆ ಉತ್ತಮ ಅಭಿಪ್ರಾಯ ಇದೆ. ಕಳೆದ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರು ಕೂಡ ಇದನ್ನೇ ಹೇಳಿದ್ದರು. ಇದು ಎಲ್ಲರೂ ಸೇರಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದರ ಪ್ರತಿಫಲವಾಗಿದೆ. ಈ ಸಲವೂ ಅನುದಾನಕ್ಕಾಗಿ ಸಿಎಂ ಭೇಟಿ ಮಾಡುತ್ತೇನೆ. ಪಾಲಿಕೆಯಿಂದ ಅಗತ್ಯ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿ’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

‘ಚಾಮುಂಡೇಶ್ವರಿ ದೇವಿಗೆ ಪ್ರತಿ ವರ್ಷ ಚಿನ್ನದ ಒಡವೆ ನೀಡುವುದು ವಾಡಿಕೆ. ಇದನ್ನು ನಿರಂತರವಾಗಿ ಆಚರಿಸಿಕೊಂಡು ಬರುತ್ತಿದ್ದು, ಕಳೆದ ಬಾರಿ ಕಾಸಿನ ಸರ ನೀಡಲಾಗಿತ್ತು. ಈ ಬಾರಿ ಏನು ನೀಡಬಹುದು ಎಂದು ಮುಂಚಿತವಾಗಿಯೇ ನಿರ್ಧರಿಸಿದರೆ ಅನುಕೂಲವಾಗಲಿದೆ. ಒಂದು ವೇಳೆ, ರಚಿಸಿದ ಸಮಿತಿಗಳೇ ಕಾರ್ಯ ನಿರ್ವಹಣೆಯಲ್ಲಿ ವಿಳಂಬ ಧೋರಣೆ ತೋರಿದರೆ ಇಡೀ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ, ಎಚ್ಚರಿಕೆ ವಹಿಸಬೇಕು’ ಸೂಚಿಸಿದರು.

ಆಯುಕ್ತ ಮಾಯಣ್ಣಗೌಡ ಮಾತನಾಡಿ, ‘ಗಣೇಶ ಹಬ್ಬ, ಈದ್ ಮಿಲಾದ್ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅದಕ್ಕಾಗಿ ವಾರ್ಡ್‌ವಾರು ಜವಾಬ್ದಾರಿಗಳನ್ನು ಹಂಚಲಾಗಿದ್ದು, ಇದರ ನಡುವೆ ತಮ್ಮ ಕರ್ತವ್ಯಗಳನ್ನು ಸಹ ಸರಿಯಾಗಿ ನಿರ್ವಹಿಸಬೇಕು ಸೂಚಿಸಿದರು.

ದಸರಾ ಅಂಗವಾಗಿ ಒಟ್ಟು ೧೪ ಸಮಿತಿಗಳನ್ನು ರಚಿಸಲಾಗಿದ್ದು, ಪಾಲಿಕೆ ಮಹಾನಗರ ಅಧಿಕಾರಿಗಳು, ಸಿಬ್ಬಂದಿಗೆ ಇದರ ಜವಾಬ್ದಾರಿ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...