ಶಿವಮೊಗ್ಗ | ಸಂಸದ ರಾಘವೇಂದ್ರ, ವಿಜಯೇಂದ್ರ ಯಾವ ಕೋಟದಲ್ಲಿ ಹುದ್ದೆ ಪಡೆದಿದ್ದಾರೆ? ಆಯನೂರು ಮಂಜುನಾಥ ಪ್ರಶ್ನೆ

Date:

ಶಿವಮೊಗ್ಗ, ಸಂಸದ ರಾಘವೇಂದ್ರ ಮೊದಲ ಬಾರಿ ಯಾವ ಕೋಟದಲ್ಲಿ ಲೋಕಸಭಾ ಸದಸ್ಯರಾಗಿದ್ದಾರೆ, ಸಂಸದರ ಸಹೋದರ ಬಿ ವೈ ವಿಜಯೇಂದ್ರ ಯಾವ ಕೋಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ ಎನ್ನುವುದನ್ನು ಸ್ಪಷ್ಟೀಕರಣ ನೀಡಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಆಗ್ರಹಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಈ ಬಗ್ಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪ ಅಹಿಂದ ಮೀಸಲಾತಿಯಿಂದಾಗಿ ಸಚಿವರಾಗಿದ್ದಾರೆಂದು ಹೇಳಿದ್ದಾರೆ ಎನ್ನುವುದಕ್ಕೆ ತಿರುಗೇಟು ನೀಡಿದರಲ್ಲದೆ, ಪುರಸಭಾ ಸದಸ್ಯನಾಗಿದ್ದ ತಾನು ಎಂಪಿ ಆಗಲು ಯಾವ ಹಂತದ ಅರ್ಹತೆ ಪಡೆದಿದ್ದರು. ಇದರ ಬಗ್ಗೆ ಚರ್ಚೆ ಮಾಡಬೇಕು. ಮನಸ್ಸಿಗೆ ಬಂದಂತೆ ಮಾತನಾಡಬಾರದು. ಮೊದಲು ತಮ್ಮ ವಿಚಾರವಾಗಿ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಾಮಾಜಿಕ ವ್ಯವಸ್ಥೆಗೆ ತಕ್ಕಂತೆ ಸ್ಥಾನಮಾನವನ್ನು ಎಲ್ಲರೂ ಪಡೆಯುತ್ತಾರೆ. ಜಾತಿ ಕೂಟದಲ್ಲಿ ಅಲ್ಲ ಎನ್ನುವುದನ್ನು ಸಂಸದರು ಅರಿಯಬೇಕಿದೆ. ನಮ್ಮ ಸಂಸದರು ಸಾಮಾಜಿಕ ವ್ಯವಸ್ಥೆಯ ರಚನೆ ಅರ್ಥೈಸಿಕೊಳ್ಳಲಾಗದವರೆನ್ನುವುದು ವಿಷಾದನೀಯ ಎಂದರು.

ವೀರಶೈವ ಲಿಂಗಾಯತ ಮಹಾಸಭಾ ಸಮೀಕ್ಷೆಯ ಫಾರಂನಲ್ಲಿ ವೀರಶೈವ ಲಿಂಗಾಯತ ಧರ್ಮ ಎಂದು ಬರೆಸಲು ಸೂಚಿಸಿದೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ಕುಟುಂಬ ಲಿಂಗಾಯತರೇ ಅಲ್ಲ ಎಂದು ಹೇಳಿದ್ದಾರೆ. ಆದರೆ ಯಡಿಯೂರಪ್ಪ ಕುಟುಂಬ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವೀರಶೈವ ಮಹಾಸಭಾದ ನಿರ್ದೇಶಕರಾಗಿರುವ ರಾಘವೇಂದ್ರ ಲಿಂಗಾಯತರಲ್ಲದಿದ್ದರೆ ಹೇಗೆ ನಿರ್ದೇಶಕರಾದರು, ಸಮೀಕ್ಷೆಯಲ್ಲಿ ಹಿಂದು ಎಂದು ಬರೆಸಿದ್ದಾರೋ ಅಥವಾ ವೀರಶೈವ ಲಿಂಗಾಯತ ಎಂದು ಬರೆಸಿದ್ದಾರೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದರು.

ಶೈಕ್ಷಣಿಕ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಬಗ್ಗೆ ಗೊಂದಲ ಸೃಷ್ಟಿ ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸ್ವತಃ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯೇ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಸಂವಿಧಾನದ ಮೇಲೆ ಪ್ರತಿಜ್ಞೆ ಮಾಡಿ ಸಚಿವನಾದ ಒಬ್ಬ ವ್ಯಕ್ತಿ ಈ ರೀತಿ ಮಾತನಾಡಬಹುದೇ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...