ಶಿವಮೊಗ್ಗ | ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Date:

Advertisements

ಶಿವಮೊಗ್ಗ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಗಸ್ಟ್‌ 15 ರಂದು ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಮಂಗಳವಾರ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರದ ಡಿ.ಎ.ಆರ್.ಮೈದಾನದಲ್ಲಿ ಆಚರಿಸಲಾಗುತ್ತಿದ್ದ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಥಳೀಯ ಜನರ ಅಪೇಕ್ಷೆಯಂತೆ ಸಾರ್ವಜನಿಕರ ಒತ್ತಾಯದ ಮೇರೆಗೆ 12 ವರ್ಷಗಳ ನಂತರ ನೆಹರೂ ಸ್ಟೇಡಿಯಂನಲ್ಲಿ ಆಚರಿಸಲು ನಿರ್ಣಯಿಸಲಾಗಿದೆ ಎಂದ ಅವರು ಸ್ಟೇಡಿಯಂನಲ್ಲಿನ ಸಿಂಥೆಟಿಕ್‌ ಟ್ರಾಕ್ ಹಾನಿಗೊಳಗಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.

ಈ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದವರು ನುಡಿದರು.

Advertisements

ಸ್ವಾತಂತ್ರ ದಿನಾಚರಣೆಯ ಮುನ್ನಾ ದಿನದಂದು ನಗರದ ಎಲ್ಲಾ ಕಚೇರಿಗಳ ಮುಖ್ಯಸ್ಥರು ತಮ್ಮ ಕಚೇರಿ ಕಟ್ಟಡಗಳನ್ನು ನಗರದ ಪ್ರಮುಖ ವರ್ತುಲಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದ ಅವರು, ಸ್ಥಳೀಯ ಸರ್ಕಾರೇತರ ಸಂಘ-ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳೂ ಸಹ ಈ ಸಂಭ್ರಮಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X