ಶಿವಮೊಗ್ಗ , ನಗರದ ಹೊರವಲಯ ಅಬ್ಬಲಗೆರೆ ಗ್ರಾಮದ ಅಂಗನವಾಡಿಗೆ, ಆಗಸ್ಟ್ 16 ರಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ಅವರು ದಿಡೀರ್ ಭೇಟಿಯಿತ್ತು ಪರಿಶೀಲಿಸಿದರು.
ಈ ವೇಳೆ ದಾಖಲಾತಿಗಳ ತಪಾಸಣೆ ನಡೆಸಿದರು. ಮಕ್ಕಳಿಗೆ ನೀಡಲಾಗುವ ಆಹಾರ ಹಾಗೂ ಅಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಖಾಯಂ ಲೋಕ್ ಅದಾಲತ್ ಕುರಿತಂತೆ ಜಾಗೃತಿ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು ಭಾಗಿಯಾದರು.
ಲೋಕ್ ಆದಾಲತ್ ಕುರಿತಂತೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಭಾಗ್ಯ ಬಿ ಹೊಸಟ್ಟಿ, ಉಪಾಧ್ಯಕ್ಷರಾದ ರಾಜಶೇಖರಪ್ಪ, ಪಿಡಿಓ ರಾಜಪ್ಪ ಸೇರಿದಂತೆ ಗ್ರಾಪಂ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.