ಶಿವಮೊಗ್ಗ | ವಿವಿಧ ಕನ್ನಡ ಪರ ಸಂಘಟನೆಗಳ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Date:

ಶಿವಮೊಗ್ಗ, ನವೆಂಬರ್ 1ರ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳು ಮತ್ತು ಕನ್ನಡ ಪರ ಸಂಘಟನೆಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ನಗರ ಜೆಡಿ(ಎಸ್) ಅಧ್ಯಕ್ಷ ದೀಪಕ್ ಸಿಂಗ್ ಪಾಲ್ಗೊಂಡರು.

- Advertisement -

ವಿನೋಬನಗರದ ಶ್ರೀ ಮಾತೃ ಭೂಮಿ ಕನ್ನಡ ಯುವಕರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಸಿಹಿ ಹಾಗೂ ಅನ್ನ ಸಂತರ್ಪಣೆ ನೆರವೇರಿಸಿ, ಕನ್ನಡ ನಾಡು-ನುಡಿ-ಜಲ-ಸಂಸ್ಕೃತಿಯ ಸಂರಕ್ಷಣೆಗಾಗಿ ತ್ಯಾಗ-ಬಲಿದಾನ ಮತ್ತು ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...
1002488180

ಕಾರ್ಯಕ್ರಮದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ದೀಪಕ್ ಸಿಂಗ್, “ಕನ್ನಡಿಗರಾಗಿ ನಮ್ಮೆಲ್ಲರ ಮೇಲೆ ನಾಡಿನ ಸಂಸ್ಕೃತಿ ಮತ್ತು ಭಾಷೆಯನ್ನು ಕಾಪಾಡುವ ಜವಾಬ್ದಾರಿ ಇದೆ. ಇದಕ್ಕಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.

ರಾಜ್ಯೋತ್ಸವದ ಸಂದೇಶವನ್ನು ಎತ್ತಿ ಹಿಡಿದ ಅವರು, ಯುವಕರು ಮತ್ತು ಮಕ್ಕಳಲ್ಲಿ ಕನ್ನಡ ಪ್ರೀತಿ ಬೆಳೆಸುವಂತೆ ಒತ್ತಾಯಿಸಿದರು.

ಸಂಘಟನೆಗಳು ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಗಳು ನಗರದಲ್ಲಿ ಕನ್ನಡ ಉತ್ಸವದ ಸಡಗರಕ್ಕೆ ಮತ್ತಷ್ಟು ಬಣ್ಣ ತಂದಿದ್ದವು.ರಾಜ್ಯೋತ್ಸವದ ಈ ಆಚರಣೆಗಳು ಶಿವಮೊಗ್ಗದಲ್ಲಿ ಕನ್ನಡ ಒಗ್ಗಟ್ಟು ಮತ್ತು ಸಾಂಸ್ಕೃತಿಕ ಅರಿವನ್ನು ತೋರಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

1002487000

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಪಾಲಕ್ಷಿ, ಮಾಲತೇಶ್, ಸಂಘದ ಅಧ್ಯಕ್ಷ ಅಶೋಕ್, ಪ್ರಮುಖರಾದ ಸುರೇಶ್, ವೆಂಕಟೇಶ್, ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...