ಶಿವಮೊಗ್ಗ | ಶಾಲೆಗಳಲ್ಲಿ ಕರಾಟೆ ಕಡ್ಡಾಯವಾಗಲಿ : ನಟ ಸುಮನ್ ತಲ್ವಾರ್

Date:

ಶಿವಮೊಗ್ಗ, ಸ್ವರಕ್ಷಣಾ ಕೌಶಲ್ಯ ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಮುಖ್ಯವಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರೌಢಶಾಲೆ ಮತ್ತು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ಕಡ್ಡಾಯವಾಗಬೇಕು ಎಂದು ಬಹುಭಾಷಾ ನಟ, ಡಾನ್ ಬ್ಲ್ಯಾಕ್ ಬೆಲ್ಟ್ ಸುಮನ್ ತಲ್ವಾರ್ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾಟೆ ತರಬೇತಿ ಪಡೆಯುವ ಮೂಲಕ ಮನುಷ್ಯ ತನ್ನನ್ನು ತಾನು ಪ್ರತಿಕೂಲ ಸಂದರ್ಭದಲ್ಲಿ ರಕ್ಷಿಸಿಕೊಳ್ಳಬಹುದಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರಿಗೆ ಆತ್ಮರಕ್ಷಣಾ ಕಲೆಯ ಅಗತ್ಯವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಾಲಾ ಹಂತದಲ್ಲೇ ಬಾಲಕಿಯರಿಗೆ ಇದನ್ನು ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯ ಮಾಡಬೇಕು ಕಲಿಸಬೇಕು. ದೇಹಕ್ಕೆ ಉತ್ತಮ ವ್ಯಾಯಾಮ ಲಭ್ಯವಾಗುತ್ತದೆ. ಮತ್ತು ದುಶ್ಚಟಗಳು ದೂರವಾಗುತ್ತದೆ ಎಂದರು.

ಇತ್ತೀಚೆಗೆ ಎಲ್ಲಾ ಕಡೆ ಮಾದಕ ವ್ಯಸನ ಹೆಚ್ಚಾಗುತ್ತಿದೆ. ಮಾದಕ ವಸ್ತುಗಳ ಸೇವನೆಯಿಂದ ಆತನ ದೈಹಿಕ ಆರೋಗ್ಯ ಮತ್ತು ಮುಖಚರ್ಯೆ ಬದಲಾಗುವುದು ಮಾತ್ರವಲ್ಲ, ಕುಟುಂಬದ ನೆಮ್ಮದಿ ಮತ್ತು ಪ್ರತಿಷ್ಠೆ ಹಾಳಾಗುತ್ತದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು, ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕಾನೂನು ಕ್ರಮ ಜಾರಿಗೆ ತರಬೇಕು ಎಂದರು.

ಅಮೆರಿಕಾದ ಕರಾಟೆ ಗ್ರಾಂಡ್ ಮಾಸ್ಟರ್ ಫೆರಿಎಫ್. ಮೌಲೆ ಮಾತನಾಡಿ, ಭಾರತ ಆರೋಗ್ಯದಲ್ಲಿಯೂ ಸದೃಢವಾಗಿದೆ. ಆರ್ಥಿಕವಾಗಿಯೂ ಸದೃಡವಾಗಿದೆ. ರಾಷ್ಟ್ರಗಳ ಮೇಲೂ ಇದು ಪ್ರಭಾವ ಬೀರುತ್ತಿದೆ. ಎಲ್ಲಾ ರಂಗಗಳಲ್ಲೂ ಭಾರತ ಮುಂದುವರೆದಿದ್ದು, ಕರಾಟೆಯು ಭಾರತವನ್ನು ಆರೋಗ್ಯ ವಂತರನ್ನಾಗಿಸಿದೆ ಎಂದರು.

ಬಾಕ್ಸ್ನಾಳೆ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಆರನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯಲಿದ್ದು, ಶ್ರೀಲಂಕಾ, ನೇಪಾಳ, ಮಹಾರಾಷ್ಟ್ರ, ಗೋವಾ, ಆಂಧ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಮತ್ತು ದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಶಿವಮೊಗ್ಗ ಕರಾಟೆ ಅಸೋಷಿಯೇಷನ್ನಿನ ಅಧ್ಯಕ್ಷ ವಿನೋದ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಜಯ್ ಲಾವ, ಅಲ್ತಾಫ್ ಪಾಶಾ, ರಾಘವೇಂದ್ರ ಆರ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...