ಶಿವಮೊಗ್ಗ | ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ

Date:

*ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ.

- Advertisement -

ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್.. ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ.ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ವಿರುದ್ದ ಕಂಡಕ್ಟರ್ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಕಂಡಕ್ಟರ್ ದೂರಿನಲ್ಲಿ ಏನೀದೆ?

ಸೆಪ್ಟೆಂಬರ್ 17 ರ ಸಂಜೆ ಶಿಕಾರಿಪುರ ಬಸ್ ನಿಲ್ದಾಣದಲ್ಲಿ ಬಸ್ ನಿಂತಿದ್ದ ವೇಳೆ, ಕೆಲ ಶಾಲಾ ವಿದ್ಯಾರ್ಥಿಗಳು ಚಾಲಕ ಕುಳಿತುಕೊಳ್ಳುವ ಸೀಟಿನ ಬಾಗಿಲಿನ ಮೂಲಕ ಬಸ್ ಹತ್ತಲು ಮುಂದಾಗಿದ್ದರು.ವಿದ್ಯಾರ್ಥಿಗಳಿಗೆ ಡ್ರೈವರ್ ಸೀಟಿನ ಬಾಗಿಲಿನಿಂದ ಹತ್ತದಂತೆ ತಿಳಿಸಿ, ಬಸ್ ನಿಂದ ಕೆಳಗಿಳಿಸಿದೆ.

ನಂತರ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಹತ್ತಿಸಿಕೊಂಡು ಕಪ್ಪನಹಳ್ಳಿ ಮಾರ್ಗವಾಗಿ ಮುಡುಬಾಸಿದ್ದಾಪುರಕ್ಕೆ ಬಸ್ ಬಂದಿತು.

ಪ್ರಯಾಣಿಕರನ್ನು ಇಳಿಸಿ ಶಿಕಾರಿಪುರಕ್ಕೆ ಬಸ್ ಹಿಂದಿರುಗುತ್ತಿದ್ದಾಗ, ಕೋಟಿಪುರ ಗ್ರಾಮದಲ್ಲಿ ಕೆಲವರು ಬಸ್ ನಿಲ್ಲಿಸಿದರು. ತಮ್ಮನ್ನು ಕೆಳಕ್ಕೆ ಇಳಿಸಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

ಬಸ್ ಚಾಲಕ ಜಗಳ ಬಿಡಿಸಿದ್ದು, ಸದರಿ ಬಸ್ ನಲ್ಲಿಯೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆನೆ’ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕಂಡಕ್ಟರ್ ತಿಳಿಸಿದ್ದಾರೆ.

ಸದರಿ ವಿಷಯವನ್ನು ಮನೆಗೆ ಆಗಮಿಸಿದ ವಿದ್ಯಾರ್ಥಿಗಳು, ತಮ್ಮ ಪೋಷಕರ ಗಮನಕ್ಕೆ ತಂದಿದ್ದಾರೆ.ಗ್ರಾಮದ ಮೂಲಕ ಬಸ್ ಹಿಂದಿರುಗುತ್ತಿದ್ದ ವೇಳೆ, ಬಸ್ ನಿಲ್ಲಿಸಿ ಕಂಡಕ್ಟರ್ ನನ್ನು ಗ್ರಾಮಸ್ಥರು ವಿಚಾರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೆಲವರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...