ಶಿವಮೊಗ್ಗ | ನನ್ನ ಹಲ್ಲು ಮುರಿದು ಹೋಗಲು KSRTC ಬಸ್ ಚಾಲಕನೆ ಕಾರಣ ; ಆನಂದಪುರದಲ್ಲಿ ಕಂಪ್ಲೆಂಟ್ ದಾಖಲು

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವಾರ ಜುಲೈ 24 ರಂದು ಆನಂದಪುರ ಸಮೀಪದ ಮುಂಬಾಳು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಆರೋಪಿಸಿ ಪ್ರಯಾಣಿಕರೊಬ್ಬರು ದೂರು ದಾಖಲಿಸಿದ್ದಾರೆ.

- Advertisement -

ಈ ಅಪಘಾತದಲ್ಲಿ ತಮ್ಮ12 ಹಲ್ಲುಗಳು ಮುರಿದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದೀಗ ಗಾಯಾಳು ಪ್ರಯಾಣಿಕರೊಬ್ಬರು ಆನಂದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಸ್ ಚಾಲಕ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಇತರೆ ಪ್ರಯಾಣಿಕರು ತಮ್ಮ ಮೇಲೆ ಬಿದ್ದ ಪರಿಣಾಮ ತಮ್ಮ 12 ಹಲ್ಲುಗಳು ಮುರಿದು ಹೋಗಿವೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಅಪಘಾತಕ್ಕೆ ಕಾರಣನಾದ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಆನಂದಪುರ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...