ಶಿವಮೊಗ್ಗ ನಗರದಲ್ಲಿ ಸ್ಥಳೀಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ಮಾರ್ಗಕ್ಕೆ ಸಂಚರಿಸಲು ಸರ್ಕಾರಿ ನಗರ ಸಾರಿಗೆ (ಕೆ.ಎಸ್.ಆರ್.ಟಿ.ಸಿ) ಬಸ್ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಶನಿವಾರ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಈ ಭಾಗಕ್ಕೆ ಸರ್ಕಾರಿ ನಗರ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಅವಿರತ ಶ್ರಮವಹಿಸಿದ ಸ್ಥಳೀಯ ಮುಖಂಡ ಚೇತನ್ ಕೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಮಾಜಿ ಸೂಡಾ ಅಧ್ಯಕ್ಷ ಎನ್. ರಮೇಶ್, ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ವಿಜಯಲಕ್ಷ್ಮಿ ಪಾಟೀಲ್, ಮುಖಂಡರಾದ ರಮೇಶ್ ಹೆಗ್ಡೆ, ಎಚ್ ಸಿ ಯೋಗೇಶ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಖಲೀಂ ಪಾಷ, ಕಾಂಗ್ರೆಸ್ ಮುಖಂಡರಾದ ಕೆ. ಚೇತನ್, ಮಧುಸೂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, ಯುವ ಕಾಂಗ್ರೆಸ್ ನಗರಾಧ್ಯಕ್ಷ ಚರಣ್, ಜಿಲ್ಲಾ ಎನ್.ಎಸ್.ಯು .ಐ ಅಧ್ಯಕ್ಷ ವಿಜಯ್ ಮೊದಲಾದವರು ಉಪಸ್ಥಿತರಿದ್ದರು.
