ಶಿವಮೊಗ್ಗ l ಪತ್ನಿಗೆ ಕಿರುಕುಳ; ಕುಟುಂಬವರಿಂದಲೇ ಪತಿಯ ಹತ್ಯೆ

Date:

ಓರ್ವ ಯುವಕನನ್ನು ಆತನ ಮಾವ ಮತ್ತು ಸಂಬಂಧಿಕರೇ ಸೇರಿ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪದ ಶ್ರೀನಿಧಿ ವೈನ್ ಶಾಪ್ ಎದುರು ನಡೆದಿದೆ.

- Advertisement -

ಹತ್ಯೆಯಾದ ಯುವಕ ಅರುಣ್ ಎಂಬಾತ, ಯಶಸ್ವಿನಿ ಎಂಬುವವರು ಪರಸ್ಪರ ಪ್ರೀತಿಸಿ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಬ್ಬರಿಗೂ ಒಂದು ಮಗು ಕೂಡ ಇದೆ. ಕೂಲಿ ಕೆಲಸ ಮಾಡುತ್ತಿದ್ದ ಅರುಣ್ ಆರಂಭದಲ್ಲಿ ಚೆನ್ನಾಗಿದ್ದರೂ, ದಿನಕಳೆದಂತೆ ಗಾಂಜಾ ಮತ್ತು ಮದ್ಯಪಾನವನ್ನ ಹೆಚ್ಚಾಗಿ ಮಾಡುತ್ತಿದ್ದ ಎನ್ನಲಾಗಿದೆ. ಈ ಚಟದ ಬೆನ್ನಲ್ಲೇ ಪತ್ನಿ ಯಶಸ್ವಿನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದ. ಪತಿಯ ದೌರ್ಜನ್ಯ ತಾಳಲಾರದೆ ಯಶಸ್ವಿನಿ ಕಳೆದ ಮೂರು ತಿಂಗಳಿನಿಂದ ಮಗುವಿನೊಂದಿಗೆ ತವರು ಮನೆಯಲ್ಲಿ ಆಶ್ರಯ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹತ್ಯೆಯಾದ ಯುವಕ ಪತ್ನಿಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ನಿಮ್ಮ ಇಡೀ ಕುಟುಂಬವನ್ನೇ ಟಾರ್ಗೆಟ್ ಮಾಡಿ ಮುಗಿಸುತ್ತೇನೆ ಎಂಬ ಅರುಣ್‌ ಬೆದರಿಕೆ ಹಾಕುತ್ತಿದ್ದ ಇದರಿಂದ ಪತ್ನಿ ಯಶಸ್ವಿನಿ ಮನೆಯವರು ಭಯಭೀಯತರಾಗಿದ್ದರು. ಬುಧವಾರ ರಾತ್ರಿ ಅರುಣ್ ವೈನ್ ಶಾಪ್ ಮುಂದೆ ನಿಂತಿದ್ದಾಗ, ಬೈಕ್‌ನಲ್ಲಿ ಬಂದ ಮಾವ ತಿಪ್ಪೇಶ್ ಮತ್ತು ಹೆಂಡತಿಯ ಸೋದರ ಮಾವ ಲೋಕೇಶ್ (ಕೆಲವು ಮೂಲಗಳ ಪ್ರಕಾರ ಪತ್ನಿಯ ತಮ್ಮ ಮಂಜುನಾಥ್) ಏಕಾಏಕಿ ದಾಳಿ ನಡೆಸಿದ್ದಾರೆ. ಕೈಯಲ್ಲಿದ್ದ ಕಬ್ಬಿಣದ ರಾಡ್‌ನಿಂದ ಅರುಣ್‌ನ ತಲೆಗೆ ಬಲವಾಗಿ ಹೊಡೆದಿದ್ದಾರೆ. ಹೊಡೆತದ ತೀವ್ರತೆಗೆ ಅರುಣ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | KPS ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೆ ರಾಜ್ಯವ್ಯಾಪಿ ಹೋರಾಟ; AIDSO ಎಚ್ಚರಿಕೆ

ಈ ಕುರಿತು ವಿನೋಬ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸ, ಪ್ರಕರಣ ದಾಖಲೀಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...