ಶಿವಮೊಗ್ಗ | ಕಾರ್ಮಿಕ ಸಚಿವ ಸಂತೋಷ್ ಲಾಡ್ ರಿಂದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

Date:

Advertisements

ಶಿವಮೊಗ್ಗ, ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ನೆನ್ನೆ ದಿವಸ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ‌ ವೆಚ್ಚದಲ್ಲಿ ನೂತನವಾಗಿ‌ ನಿರ್ಮಿಸಲಾಗಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆಗೊಳಿಸಿದರು.

ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಸುರಕ್ಷಿತವಾಗಿ ತಂಗಲು ಅವರಿಗೆ ಈ ವಸತಿ ಸಮುಚ್ಚಯವನ್ನು ಮಂಡಳಿ ವತಿಯಿಂದ ಈ ಸಮುಚ್ಚಯವನ್ನು ನಿರ್ಮಿಸಲಾಗಿದೆ. 2022 ರ ಜೂನ್ ಮಾಹೆಯಲ್ಲಿ‌ ಕಾಮಗಾರಿ ಆರಂಭಗೊಂಡಿತ್ತು.

ಶ್ರಮಿಕ ತಾತ್ಕಾಲಿಕ ಸಮುಚ್ಚಯ ವಿವರ*:10 ಎಕರೆ ಪ್ರದೇಶದಲ್ಲಿ ವಸತಿ ನಿಲಯಗಳು ಮತ್ತು ವಸತಿ ಗೃಹಗಳನ್ನು‌ ರ್ಮಿಸಲಾಗಿದೆ. ಒಟ್ಟು 03 ವಸತಿ ನಿಲಯ ಬ್ಲಾಕ್ಗಳು ಇದ್ದು, ಪ್ರತಿ ಬ್ಲಾಕ್ ನಲ್ಲಿ 11 ಡಾರ್ಮಿಟರಿಗಳಿವೆ. ಪ್ರತಿ ಡಾರ್ಮೆಟರಿಯಲ್ಲಿ 24 ವಸತಿ ಸಾಮರ್ಥ್ಯ ಇದೆ. ಪ್ರತಿ ಬ್ಲಾಕ್ ನ ವಸತಿ ಸಾಮರ್ಥ್ಯ 264 ಇದ್ದು ಒಟ್ಟು 03 ಬ್ಲಾಕ್ ಗಳ ವಸತಿ ಸಾಮರ್ಥ್ಯ 792 ಇದೆ.

Advertisements

ಹಾಗೂ 03 ವಸತಿ ಗೃಹ ಬ್ಲಾಕ್ ಗಳನ್ನು ನಿರ್ಮಿಸಿದ್ದು, ಪ್ರತಿ ಬ್ಲಾಕ್ ನಲ್ಲಿ 12 ಫ್ಲಾಟ್ ಗಳು, ಒಟ್ಟು 36 ಫ್ಲಾಟ್ ಗಳು, 144 ವಸತಿ ಸಾಮರ್ಥ್ಯ ಇದ್ದು, 01ಬಿಹೆಚ್ ಕೆವಿಸ್ತೀರ್ಣ 400 ಚ. ಅಡಿ ಇದೆ. ತಾತ್ಕಾಲಿಕ ವಸತಿ ಸಮುಚ್ಚಯದಲ್ಲಿ ಕಾರ್ಮಿಕರು ಅಡುಗೆ ಮಾಡಲು ಅನುಕೂಲವಾಗುವಂತೆ ಡಾರ್ಮಿಟರಿಯಲ್ಲಿ ಸುಸಜ್ಜಿತವಾದ ಅಡುಗೆ ಮನೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಬಿಸಿ ನೀರಿಗಾಗಿ ಸೋಲಾ‌ರ್ ಪ್ಯಾನಲ್‌ ವ್ಯವಸ್ಥೆ ಇದೆ. ಡಾರ್ಮಿಟರಿಗಳಲ್ಲಿ 02 ಹಂತದ ಬಂಕರ್ ಬೆಡ್ ಗಳನ್ನು ನೀಡಲಾಗಿರುತ್ತದೆ.

ಆವರಣದಲ್ಲಿ ಆಡಳಿತ ಕಚೇರಿ ಇದೆ.ವಸತಿ ಸೌಕರ್ಯ ಪಡೆಯಲು ಒಂದು ದಿನಕ್ಕೆ ರೂ.50/-ಗಳ ಶುಲ್ಕವನ್ನು ವಿಧಿಸಲಾಗುವುದು. ಸಚಿವರು ವಸತಿ ಸಮುಚ್ಚಯವನ್ನು‌ ಲೋಕಾರ್ಪಣೆಗೊಳಿಸಿದ ನಂತರ ಪರಿವೀಕ್ಷಿಸಿದರು.

ಈ ವೇಳೆ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಇತರೆ ಮುಖಂಡರು, ಅಧಿಕಾರಿಗಳು, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X