ಶಾಸನ ಸಭೆಗಳಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲದೆ ಸಮಾನತೆ ಸಾಧ್ಯವಿಲ್ಲ: ನಿವೃತ್ತ ನ್ಯಾ. ನಾಗಮೋಹನ್‌ ದಾಸ್

Date:

ಶಿವಮೊಗ್ಗದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಂತಹ ಶಾಸನ ಸಭೆಗಳಲ್ಲಿ ಮಹಿಳೆಗೆ ಸಮಾನ ಅವಕಾಶ ಸಿಗುವ ತನಕ ಮಹಿಳಾ ಸಮಾನತೆ ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

- Advertisement -

ಅವರು ಸಂವಿಧಾನ ಓದು ಕರ್ನಾಟಕ ಮತ್ತು ಶಿವಮೊಗ್ಗದ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಗರ ಹೊರವಲಯದ ಸನ್ನಿಧಿ ಸಭಾಂಗಣದಲ್ಲಿ ಎರಡು ದಿನಗಳ ಆಯೋಜಿಸಿದ್ದ ಸಂವಿಧಾನ ಓದು ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದ ಕೊನೆ ದಿನವಾದ ಭಾನುವಾರ ಸಮಾರೋಪಕ್ಕೂ ಮುನ್ನ ಅವರು ಸಂವಿಧಾನ ಮತ್ತು ಮಹಿಳೆ ವಿಷಯ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1001793724

ಜಗತ್ತಿನ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಹಾಗೆಯೇ ಆರ್ಥಿಕ ಶ್ರಮ ಶಕ್ತಿಯಲ್ಲೂ ಅವರದೇ ಹೆಚ್ಚು ಪಾಲು ಇದೆ. ಆದರೂ ಅವರನ್ನ ಇಂದಿಗೂ ಎರಡನೇ ದರ್ಜೆಯ ವ್ಯಕ್ತಿಯನ್ನಾಗಿ ಪರಿಗಣಿಸಿದ್ದರ ಹಿಂದೆ ಮಹಿಳೆಯರು ರಾಜಕೀಯ, ಅರ್ಥಿಕ ಹಾಗೂ ಸಾಮಾಜಿಕ ಕ್ಷೇತ್ರದಿಂದ ದೂರು ಇರುವುದೇ ಕಾರಣವಾಗಿದೆ ಎಂದರು.

ದೇಶದ ಲೋಕಸಭೆ ಸೇರಿದಂತೆ ಶಾಸನ ಸಭೆಗಳಲ್ಲಿ ಈಗಲೂ ಮಹಿಳೆಯರಿಗೆ ಸಮಾನ ಅವಕಾಶ ಸಿಕ್ಕಿಲ್ಲ. ಶೇ 33 ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ಬರುತ್ತಿಲ್ಲ. ಆಳುವವರ ಪುರುಷಾಧಿಪತ್ಯದ ಮನಸ್ಥಿತಿ ಈಗಲೂ ಬದಲಾಗಿಲ್ಲ ಎಂದು ವಿಷಾಧಿಸಿದ ಅವರು,ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕಿದೆ ಎಂದು ಪ್ರತಿಪಾದಿಸಿದರು.

1001793723

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಈ ದೇಶದ ಮಹಿಳೆಯರ ಪಾತ್ರವೂ ದೊಡ್ಡದಿದೆ ಎಂದು ಅವರು ತಮ್ಮೂರಿನ ಪಾಲ್ಗೊಳ್ಳಬೇಕೆನ್ನುವುದನ್ನು ವೆಂಕಟಮ್ಮನ ಉದಾಹರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆ ಅಂದಾಕ್ಷಣ ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ ಅಂತಲೇ ಉದಾಹರಿಸಲಾಗುತ್ತದೆ ಎಂದರು. ಯಾಕೆಂದರೆ ಅವರು ಅಮರರಾದವರು.

ಹಾಗೆಯೇ ಈ ದೇಶದ ದೊಡ್ಡ ಮಹಿಳಾ ಶಕ್ತಿ ಶಕ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದೆ.ಹಾಗೆಯೇ ಅನೇಕ ಮಹಿಳಾ ಪರವಾದ ಕಾನೂನುಗಳ ಜಾರಿಗೆ ಬರುವುದಕ್ಕೂಕಾರಣವಾಗಿದ್ದಾರೆ ಎಂದರು. ಕೋಮುವಾದ, ಮೂಲಭೂತವಾದ ಇವತ್ತು ಸಮಾಜದ ಅಭಿವೃದ್ದಿ ಮತ್ತು ಐಕ್ಯತೆಗೆ ದೊಡ್ಡ ತೊಡಕಾಗಿದೆ ಎಂದು ತಿಳಿಸಿದರು. ಅವು ನಾಶವಾಗದ ಹೊರತು ಮಹಿಳಾವಿಮೋಚನೆ ಸಾಧ್ಯವಿಲ್ಲ ಎಂದರು. ವಿಶೇಷವಾಗಿ ಕಾನೂನು ಅರಿವು ಎಲ್ಲರಿಗೂ ಬೇಕಿದೆ ಎಂದರು.

ಮೊದಲು ದೇಶದಲ್ಲಿ ಬಹಳ ಕಡಿಮೆ ಸಂಖ್ಯೆ ಜನರು ಶಿಕ್ಷಿತರಿದ್ದರು. ಈಗ ಈ ಪ್ರಮಾಣ ಶೇ. 90 ಕ್ಕೆ ಏರಿದೆ. ಆದರೆ ಕಾನೂನು ಅರಿವು ಹೆಚ್ಚಾಗಿಲ್ಲ. ಸಂವಿಧಾನದ ಮಹತ್ವ ಗೊತ್ತಾಗಬೇಕಾದರೆ ಕಾನೂನು ಅರಿವು ಬರಬೇಕು. ಆ ಕೆಲಸ ತುರ್ತಾಗಿ ಆಗಬೇಕು ಎಂದರು.

1001793722

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್. ಆ‌ರ್.ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಮೂರ್ತಿ, ವಕೀಲರು ಹಾಗೂಸಮಾಜ ಸೇವಕ ಅನಂತ್ ನಾಯ್ಕ, ಜನಶಕ್ತಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಲ್ .ಅಶೋಕ್, ಜನಪರ ಹೋರಾಟಗಾರ ಅನಂತ ರಾಮು, ರಾಜು ಗೋರೂರು ಮಾತನಾಡಿದರು. ಪಾಧರ್ ಪಿಂಟೋ, ಫಾದರ್ ಡಿಸೋಜ ಉಪಸ್ಥಿತರಿದ್ದರು. ಶಿಬಿರದ ಪ್ರಧಾನ ಆಯೋಜಕರು ಹಾಗೂ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾದ ಕೆ.ಪಿ. ಶ್ರೀಪಾಲ್ ವಂದಿಸಿದರು. ಕೊನೆಯಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...