ಶಿವಮೊಗ್ಗ | ತುಪ್ಪೂರಿನ ಕೊರಗಿಯಲ್ಲಿ ಮಳೆ ಅವಾಂತರ: ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

Date:

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊರಗಿ ಎಂಬ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಭಾಗಷಃ ಮನೆಗಳ ವರಾಂಡವದರೆಗೂ ಮಳೆ ನೀರು ಬಂದಿದ್ದು, ಮನೆಯ ಸುತ್ತಮುತ್ತಲಿನಲ್ಲಿ ಭಾಗ ಕೊಚ್ಚಿ ಹೋಗಿರುವುದಾಗಿ ತಿಳಿದುಬಂದಿದೆ. ಇದರಿಂದ ಜನಸಾಮಾನ್ಯರು, ಸ್ಥಳೀಯ ನಿವಾಸಿಗಳು ದುಸ್ಥಿತಿ ಎದುರಿಸುವಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

ಈ ಸಂಬಂಧ ತುಪ್ಪುರು ಗ್ರಾಮ ಪಂಚಾಯತ್ ಪಿಡಿಒ ಜಯಶ್ರೀಯವರಿಗೆ ಗ್ರಾಮಸ್ಥರು ಇಂದು ಬೆಳಿಗ್ಗೆ ಸಮಸ್ಯೆ ತಿಳಿಸಿ ಸರಿಪಡಿಸಿಕೊಡಿ ಹಾಗೂ ಮತ್ತಷ್ಟು ಮಳೆ ಬಂದರೆ ಹೆಚ್ಚಿನ ಸಮಸ್ಯೆ ಉಂಟಾಗಲಿದೆ, ಮನೆಗಳಿಗೆ ನೀರು ನುಗ್ಗುಲಿದೆ ಎಂದು ಅಳಲು ತೋಡಿಕೊಂಡಿದ್ದರು. ಇದರ ಕುರಿತಾಗಿ ಇಂದು ಸಂಜೆಯಾದರೂ ಸಹ ಪಿಡಿಒ ಹಾಗೂ ಸಿಬ್ಬಂದಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಸಮಸ್ಯೆ ಬಗೆಹರಿಯದ ಕಾರಣ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಗ್ರಾಮದ ಸ್ಥಳೀಯರು ಈದಿನ ಡಾಟ್ ಕಾಮ್ ಗೆ ಮಾಹಿತಿ ತಿಳಿಸಿದ್ದರು.

ಗ್ರಾಮದಲ್ಲಿ ಮಳೆಯಿಂದ ಆದ ಸಮಸ್ಯೆ ಕುರಿತಾಗಿ ಪಿಡಿಒ ಜಯಶ್ರೀ ನಮ್ಮೊಂದಿಗೆ ಮಾತನಾಡಿ, “ಕೊರಗಿ ಗ್ರಾಮದಲ್ಲಿ ಮಳೆಯಿಂದ ತೀವ್ರ ಸಮಸ್ಯೆ ಆಗಿರುವುದಾಗಿ ಯಾರು ಒಬ್ಬರು ಸಹ ನನಗೆ ಮಾಹಿತಿ ನೀಡಿಲ್ಲ. ಸ್ಥಳೀಯರೊಬ್ಬರು ಮಾತ್ರ ನನಗೆ ಕರೆ ಮಾಡಿ ತಿಳಿಸಿದರು. ನಾನು ಅವರಿಗೆ ಇಂದು ಮೆಸ್ಕಾಂ ಅಧಿಕಾರಿಗಳೊಂದಿಗೆ ಕೆಲಸದ ನಿಮಿತ್ತ ಹೊರಗೆ ತೆರಳುತ್ತಿರುವ ಕಾರಣ ನಾಳೆ ಗ್ರಾಮಕ್ಕೆ ಭೇಟಿ ನೀಡುತ್ತೇನೆ ಪರಿಶೀಲಿಸುತ್ತೇನೆ ಎಂದು ತಿಳಿಸಿದೆ” ಎಂದು ಉತ್ತರಿಸಿದ್ದಾರೆ.

“ಈಗ ಏಕಾಏಕಿ ಮಾಧ್ಯಮದವರ ಗಮನಕ್ಕೆ ತರುವ ಬದಲು ನನಗೆ ತಿಳಿಸಿದ್ದರೆ ಸ್ವತಃ ನಾನೆ ಭೇಟಿ ನೀಡಿ ಸಮಸ್ಯೆ ಆಲಿಸುತ್ತಿದ್ದೆ. ಬಗೆಹರಿಸಿ ಕೊಡುವ ಪ್ರಯತ್ನ ಮಾಡುತ್ತಿದ್ದೆ” ಎಂದು ತಿಳಿಸಿದರು.

ಇಂದು ರಾತ್ರಿ ಹೆಚ್ಚಾಗಿ ಮಳೆ ಸುರಿದು ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆ ಎದುರಾದಲ್ಲಿ ಏನು ಮಾಡಬೇಕು. ಮೊದಲೇ ಈ ಗ್ರಾಮದಲ್ಲಿ ನೆಟ್‌ವರ್ಕ್ ಸಮಸ್ಯೆಯಿದೆ. ಯಾರಿಗೆ ಸಂಪರ್ಕ ಮಾಡಬೇಕು, ಅನಾಹುತ ಸಂಭವಿಸಿದಲ್ಲಿ ಯಾರು ಹೊಣೆಗಾರಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಪಿಡಿಒ, “ಮಾಧ್ಯಮ ವರದಿಗಾರರಾದ ನೀವೇ ಈಗ ಬನ್ನಿ. ಗ್ರಾಮಕ್ಕೆ ಒಟ್ಟಿಗೆ ತೆರಳುವ ಮೂಲಕ ಸಮಸ್ಯೆ ಬಗೆಹರಿಸಿ ಕೊಡುವ. ಹೆಚ್ಚಾಗಿ ಯಾವುದೇ ಹಾನಿ ಆಗಿಲ್ಲ”ವೆಂದು” ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, “ಊರಿನಲ್ಲಿರುವ ಒಬ್ಬ ವ್ಯಕ್ತಿ ಕೆರೆಗೆ ತಲುಪುವ ನೀರನ್ನು ತನ್ನ ತೋಟಕ್ಕೆ ತಲುಪುವ ಸ್ಥಳದಲ್ಲೇ ಸರ್ಕಾರ ಮಾಡಿರುವ ಚಾನೆಲ್‌ಗೆ ಮಣ್ಣು ತುಂಬಿದ್ದಾರೆ. ಹೀಗಾಗಿ ನೀರು ಕೆರೆಗೆ ಹೋಗಲು ಆಗುತ್ತಿಲ್ಲ. ಈ ಸಂಬಂಧ ಪ್ರತಿ ವರ್ಷ ಈ ರೀತಿ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದೆ. ಜೊತೆಗೆ ವೆಂಕಟಜ್ಜನ ಕೆರೆಗೆ ನೀರು ಹೋದಲ್ಲಿ ಈ ಪರಿಣಾಮ ನೀರು ಉರಿನೊಳಗೆ ಬರುವುದಿಲ್ಲ” ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಹಾಗಿದ್ದಲ್ಲಿ ಪ್ರತಿವರ್ಷ ಇದೆ ಸಮಸ್ಯೆ ಆಗುತ್ತಿದೆ. ಗ್ರಾಮದಲ್ಲಿ ಎಂದಾದರೆ ಯಾಕೆ ಇಲ್ಲಿವರೆಗೂ ಸಮಸ್ಯೆ ಬಗೆಹರಿಸಿಲ್ಲ? ಯಾಕೆ ಕ್ರಮ ಜರುಗಿಸಿಲ್ಲ ಹಾಗೂ ಅತಿಯಾದ ಮಳೆಯಿಂದ ಸ್ಥಳೀಯರ ಮನೆಗೆ ನೀರು ನುಗ್ಗಿದ್ದಲ್ಲಿ ಅನಾಹುತ ಆದರೆ ಏನು ಮಾಡಬೇಕು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...