ಶಿವಮೊಗ್ಗ | ಸಕ್ರೆಬೈಲ್​ ಸುತ್ತಮುತ್ತ ಒಂಟಿ ಸಲಗ ಪ್ರತ್ಯಕ್ಷ

Date:

Advertisements

ಶಿವಮೊಗ್ಗ, ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಸಕ್ರೆಬೈಲ್​ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ಅಷ್ಟೇ ಅಲ್ಲದೆ ಸಕ್ರೆಬೈಲ್​ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು ಹಾಗೂ ಬಾಳೆಗಿಡಗಳನ್ನು ನಾಶ ಮಾಡಿದೆ. ಆನೆಯ ಓಡಾಟವನ್ನು ವಿಡಿಯೋದಲ್ಲಿ ಸೆರೆ ಹಿಡಿದಿರುವ ಸಾರ್ವಜನಿಕರು ಅದನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.

ಆದರೆ ಅದ್ಯಾವುದಕ್ಕೂ ಕ್ಯಾರೇ ಮಾಡದ ಒಂಟಿ ಸಲಗ ತೋಟದಲ್ಲಿ ಸಿಕ್ಕ ವಸ್ತುಗಳನ್ನು ತಿನ್ನುತ್ತಾ ನದಿಯಲ್ಲಿ ಈಜುತ್ತಾ ಆನೆ ನಡೆದಿದ್ದೇ ದಾರಿ ಎಂಬಂತೆ ಓಡಾಡುತ್ತಿದೆ. ಈ ಹಿಂದೆಯೂ ಸಹ ಅನೇಕ ಕಾಡಾನೆಗಳು ಭದ್ರಾ ಅಭಯಾರಣ್ಯದಿಂದ ನದಿ ದಾಟಿ ಈಚೆಗೆ ಬಂದಿದ್ದವು.

ಕಳೆದ ತಿಂಗಳು ಸಹ ಸಕಲೇಶ್​ಪುರದಿಂದ ರೇಡಿಯೋ ಕಾಲರ್​ ಆನೆಯೊಂದು ಬಂದಿತ್ತು, ನಂತರ ಸಕ್ರೆಬೈಲ್​ನ ಕುಮ್ಕಿ ಆನೆಗಳ ಸಹಾಯದಿಂದ ಅದನ್ನು ಸೆರೆಹಿಡಿಯಲಾಗಿತ್ತು. ಇದೀಗ ಮತ್ತೊಂದು ಆನೆ ಪ್ರತ್ಯಕ್ಷವಾಗಿದ್ದು, ರೈತರಿಗೆ ಸಂಕಟವಾಗಿ ಪರಿಣಮಿಸಿದೆ. ಆನೆಯನ್ನು ಕೂಡಲೇ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138...

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಚಾಮರಾಜನಗರ | ರಾಜ್ಯದ ಅಭಿವೃದ್ಧಿ, ಆಡಳಿತ ಸುಧಾರಣೆಗೆ ದೇವರಾಜ ಅರಸು ಕೊಡುಗೆ ಅಪಾರ

ಚಾಮರಾಜನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

Download Eedina App Android / iOS

X