ಶಿವಮೊಗ್ಗ | ಲಾರಿ ಟರ್ಮಿನಲ್ ಸ್ಥಾಪನೆಗೆ ಲಾರಿ ಮಾಲಿಕರ ಆಗ್ರಹ

Date:

Advertisements

ಶಿವಮೊಗ್ಗ ನಗರಕ್ಕೆ ಒಂದು ಸಂಯುಕ್ತ ಟ್ರಕ್ ಟರ್ಮಿನಲ್ ನಿರ್ಮಿಸಲು ಹಲವಾರು ಸಾರಿ ಪ್ರಾದೇಶಿಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಸ್ಥಳವನ್ನು ಗುರುತಿಸದೇ ನಮ್ಮ ವಾಹನಗಳನ್ನು ನಿಲ್ಲಿಸಲು ಟ್ರಕ್ ಟರ್ಮಿನಲ್ ನ ವ್ಯವಸ್ಥೆ ಮಾಡಿರುವುದಿಲ್ಲ.

ಇದರಿಂದ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಲಾರಿ ಮಾಲೀಕರ ಸಂಘ ಮತ್ತು ಶಿವಮೊಗ್ಗ ಜಿಲ್ಲಾ ಲಾರಿ ಫೆಡರೇಷನ್ ಏಜೆಂಟ್ ಹೇಳಿದೆ.ಪತ್ರಿಕಾಗೋಷ್ಠಿಯಲ್ಲಿ‌ ಮಾತನಾಡಿದ ಸಂಘದ ಅಧ್ಯಕ್ಷ ತಲ್ಕೀನ್ ಅಹಮದ್, ರಸ್ತೆ ಅಂಚಿನಲ್ಲಿ ಲಾರಿ ನಿಲ್ಲಿದುವುದರಿಂದ ಲಾರಿಗಳಲ್ಲಿ ಕಳ್ಳತನ ಹಾಗೂ ಪೋಲಿಸರ ಕಾಟಗಳನ್ನು ಎದುರಿಸುತ್ತಿದ್ದೇವೆ.

ಆದುದರಿಂದ ನಮ್ಮ ವಾಹನಗಳ ಸುರಕ್ಷತೆಗಾಗಿ ಹಾಗೂ ಪಾರ್ಕಿಂಗ್ ಗಾಗಿ ಆದಷ್ಟು ಬೇಗ ಟ್ರಕ್ ಟರ್ಮಿನಲ್ ಅನ್ನು ನಿರ್ಮಿಸಿಕೊಡಬೇಕಾಗಿ ಜಿಲ್ಲಾಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಸಾವಿರ ಸರಕು ಸಾಗಾಣಿಕೆ ವಾಹನಗಳು ಇವೆ. ಆದುದರಿಂದ ಆದಷ್ಟು ಬೇಗ ಟ್ರಕ್ ಟರ್ಮಿನಲ್ ಅನ್ನು ನಿರ್ಮಿಸಿಕೊಡಬೇಕಾಗಿ ಮನವಿ ಮಾಡಿದರು.ಹೊಸದಾಗಿ ನಮ್ಮ ಸಂಘಕ್ಕೆ ಸದಸ್ಯರನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದು, 26-26 ನೇ ಸಾಲಿಗೆ ಹೊಸದಾಗಿ ಸದಸ್ಯರನ್ನು ತೆಗೆದುಕೊಳ್ಳುತ್ತಿದ್ದೇವೆ.

Advertisements

ಸಂಘದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವವರು ತಮ್ಮ ವಾಹನಗಳ ಆರ್.ಸಿ ಮಾಲೀಕರು ಆಧಾರ್ ಕಾರ್ಡ್ ಜೊತೆಗೆ ಒಂದು ಫೋಟೋ ತೆಗೆದುಕೊಂಡು ಶಿವಮೊಗ್ಗ ಶಂಕರ ಮಠದ ಹತ್ತಿರ ಇರುವ ನಮ್ಮ ಸಂಘದ ಕಚೇರಿಗೆ ಬಂದು 25-26 ನೇ ಸಾಲಿನ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು ಎಂದರು.

ಪ್ರತಿ ತಾಲ್ಲೂಕಿನ ಅಧ್ಯಕ್ಷರು ಆಯಾ ತಾಲ್ಲೂಕಿನ ಸರಕು ಸಾಗಾಣಿಕೆ ವಾಹನಗಳ ಮಾಲೀಕರ ಸದಸ್ಯತ್ವವನ್ನು ನೊಂದಾಯಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗದ ಬಿ.ಎ. ತಲಕೀನ್ ಅಹಮದ್- 94481 27798 ಭದ್ರಾವತಿಯ ನಾಗೇಶ್ 91088 43670, ಶಿಕಾರಿಪುರದ ಬಾಬು-88727 54475, ಸಾಗರದ ಜಾವೀದ್:88727 54475 ತೀರ್ಥಹಳ್ಳಿಯ ರಂಜಿತ್ ಶೆಟ್ಟಿ-88727 54475 ಇವರನ್ನು ಸಂಪರ್ಕಿಸಬಹುದೆಂದರು.j

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X