ಶಿವಮೊಗ್ಗ | ಕ್ರೀಡಾಸಕ್ತರ ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ

Date:

ಕ್ರೀಡಾ ಚಟುವಟಿಕೆಗೆ ಹೆಚ್ಚಿನ ಅನುಕೂಲ ಕಲ್ಪಿಸುವಂತೆ ಅಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಶಿವಮೊಗ್ಗ ನಗರದ ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು ಮಾಡಿದ್ದ ಬಹುದಿನಗಳ ಮನವಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಂದಿಸಿದ್ದಾರೆ.

- Advertisement -

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಆಯುಕ್ತ ಆರ್ ಚೇತನ್ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರೊಂದಿಗೆ ನಗರದ ನೆಹರೂ ಕ್ರೀಡಾಂಗಣ, ಗೋಪಾಲಗೌಡ ಬಡಾವಣೆಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹಾಗೂ ಡಿ ಬ್ಲಾಕ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಸ್ ಬಂಗಾರಪ್ಪ ಇಂಡೋರ್ ಶಟಲ್ ಕೋರ್ಟ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಶಟಲ್ ಕೋರ್ಟ್ ಅನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ನಿರ್ಮಿಸಬೇಕಾಗಿದ್ದು, ಕಾಮಗಾರಿಗೆ ಬೇಕಾಗುವ ಹೆಚ್ಚುವರಿ ಹಣವನ್ನು ತಾವೇ ಇಲಾಖೆಯಿಂದ ಭರಿಸಲು ಸಮ್ಮತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಉತ್ತಮ ಕಾರ್ಯಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿಯವರಿಗೆ ಹಾಗೂ ಕ್ರೀಡಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಗೋಪಾಲ್ ಗೌಡ ಬಡಾವಣೆಯ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ತುರ್ತಾಗಿ ಲಾಂಗ್ ಟೆನ್ನಿಸ್ ಗ್ರೌಂಡ್‌ಗೆ ಮೇಲ್ಛಾವಣೆ, ಟೇಬಲ್ ಟೆನ್ನಿಸ್ ನಿರ್ಮಾಣ, ಸ್ಕೇಟಿಂಗ್ ಗ್ರೌಂಡ್ ರಿನ್ನೋವೇಶನ್, ಬೇಬಿ ಸ್ವಿಮ್ಮಿಂಗ್ ಪೂಲ್, ಕುಸ್ತಿ ಅಕಾಡೆಮಿ ಹಾಗೂ ವಾಲಿಬಾಲ್ ಹಾಸ್ಟೆಲ್ ಗೆ ಸಿಎ ಸೈಟ್ ಖರೀದಿ ಹಾಗೂ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿದರು.

ಇದನ್ನೂ ಓದಿ: ಶಿವಮೊಗ್ಗ | ಹೆಚ್ಚಿದ ಶುಂಠಿ ಲಾಬಿ; ಮಲೆನಾಡ ರೈತರು ಕಂಗಾಲು

ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಸಂಯೋಜಕ ಜಿ.ಡಿ ಮಂಜುನಾಥ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯ ನಾಯ್ಕ್, ಸಿದ್ದಿ ವಿನಾಯಕ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಟಿ.ಡಿ ಗಿತೇಂದ್ರಗೌಡ, ಜಿ. ಎಸ್. ಶಿವಕುಮಾರ್ ಸಿದ್ಧಿ ಬುದ್ಧಿ ಗಣಪತಿ ದೇವಸ್ಥಾನದ ಅಧ್ಯಕ್ಷರಾದ ಬ್ಯಾಂಕ್ ಸುರೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...