ಶಿವಮೊಗ್ಗ | ಹಳೆ ದ್ವೇಷದ ಹಿನ್ನಲೆ ವ್ಯಕ್ತಿ ಮೇಲೆ ಹಲ್ಲೆ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮೂಡಲ ವಿಠಲಾಪುರ ಗ್ರಾಮದಲ್ಲಿ ಭಾನುವಾರ ಹಳೆ ದ್ವೇಷದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದೆ.

- Advertisement -

ಆನವೇರಿ ಗ್ರಾಮದ ತೌಫಿಕ್ (32) ಕೈಗೆ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಶಿವಮೊಗ್ಗದ ಟಿಪ್ಪು ನಗರದ ಮುಬಾರಕ್, ಫೌಹಾದ್‌, ತೋಹಿಬ್‌ ಹಾಗೂ ತನ್ವಿ‌ ಬಂಧಿತರು. ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಂದ ಕಾರ್ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ದನ ಕಳ್ಳ ಸಾಗಾಣೆ ದಂಧೆಯಲ್ಲಿ ತೊಡಗಿರುವ ಗುಂಪಿನ ಚಟುವಟಿಕೆ ಬಗ್ಗೆ ಈ ಹಿಂದೆ ತೌಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಕಾರಣಕ್ಕೆ ಶಿವಮೊಗ್ಗದಿಂದ ಹಿಂಬಾಲಿಸಿಕೊಂಡು ಬಂದಿದ್ದು, ಮೂಡಲ ವಿಠಲಾಪುರ ಗ್ರಾಮದ ಹೊಟೇಲ್‌ನಲ್ಲಿ ಉಪಾಹಾರ ಸೇವಿಸುತ್ತಿದ್ದಾಗ ಆರೋಪಿಗಳು ಕೊಲೆ ಮಾಡಲು ಮುಂದಾಗಿದ್ದರು.

ಹೋಟೆಲ್‌ಗೆ ಬಂದ ಆರ್‌ಎಸ್‌ಎಸ್‌ ಗಣವೇಷಧಾರಿಗಳನ್ನು ಪೊಲೀಸರೆಂದು ಭಾವಿಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂಬ ಮಾಹಿತಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...