ಶಿವಮೊಗ್ಗ | ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ಓಟ

Date:

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಬೆಳಿಗ್ಗೆ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5ಕೆ ಮತ್ತು ಪುರುಷರಿಗಾಗಿ 10ಕೆ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ಕರ್ನಾಟಕ ರಾಜ್ಯ ಪೊಲೀಸ್ ಓಟ–2024ರ ಯಶಸ್ಸಿನ ಹಿನ್ನೆಲೆಯಲ್ಲಿ, 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟವನ್ನು ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗಾಗಿ ಫಿಟ್‌ನೆಸ್ ಮತ್ತು ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ನಡೆದ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟಕ್ಕೆ ಶಾಸಕ ಚನ್ನಬಸಪ್ಪ, ಡಾ. ಧನಂಜಯ್ ಸರ್ಜಿ ಸೇರಿದಂತೆ ಇತರರು ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮ್ಯಾರಥಾನ್ ಓಟವನ್ನು ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮುಖಾಂತರ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯವಾಯಿತು.

10ಕೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕಿರಣ್, ದ್ವಿತೀಯ ಸ್ಥಾನವನ್ನು ನಂದನ್ ತೃತೀಯ ಸ್ಥಾನವನ್ನು ಭರತ್ ಅವರು ಹಾಗೂ 5ಕೆ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಾಲು ದ್ವಿತೀಯ ಸ್ಥಾನವನ್ನು ಧನರಾಜ್ ತೃತೀಯ ಸ್ಥಾನವನ್ನು ಧನುಷ್ ಹಾಗೂ 5ಕೆ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದೀಕ್ಷಾ ದ್ವಿತೀಯ ಸ್ಥಾನವನ್ನು ಸಾನಿಕ ತೃತೀಯ ಸ್ಥಾನವನ್ನು ಸೋನಿಯಾ ಪಡೆದರು.

ಪ್ರಥಮ ಸ್ಥಾನ ಪಡೆದ ವಿಜೇತರಿಗೆ ₹10,000 ನಗದು ಬಹುಮಾನ, ಪದಕ ಮತ್ತು ಪ್ರಶಸ್ತಿ ಪತ್ರ, ದ್ವಿತೀಯ ಸ್ಥಾನ ಪಡೆದ ವಿಜೇತರಿಗೆ ₹8,000 ನಗದು ಬಹುಮಾನ, ಪದಕ ಮತ್ತು ಪ್ರಶಸ್ತಿ ಪತ್ರವನ್ನು ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ₹5,000 ನಗದು ಬಹುಮಾನ, ಪದಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ಜತೆಗೆ ಮ್ಯಾರಥಾನ್‌ನಲ್ಲಿ ಭಾಗವಹಿಸಿ, ಪೂರ್ಣಗೊಳಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲಾರಿ-ಕಾರು ನಡುವೆ ಭೀಕರ ಅಪಘಾತ; ಬಿಎಂಟಿಸಿ ನಿವೃತ್ತ ನೌಕರ ಸೇರಿ ಐವರ ಸಾವು

ಈ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ, ಸೈಬರ್ ಸುರಕ್ಷತಾ ಕ್ರಮಗಳು ಮತ್ತು ಸಂಚಾರ ನಿಯಮಗಳ ಕಡ್ಡಾಯ ಪಾಲನೆಯ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಯುವಜನ ಮತ್ತು ಕ್ರೀಡಾ ಇಲಾಖೆಯ ವಿಧ್ಯಾರ್ಥಿಗಳು, ವಿವಿಧ ಶಾಲಾ ಕಾಲೇಜುಗಳ ವಿಧ್ಯಾರ್ಥಿಗಳು, ಶಿವಮೊಗ್ಗದ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳು ಮತ್ತು ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...