ಶಿವಮೊಗ್ಗ | ಜುಲೈ 15ರ ಒಳಗೆ ನೀರು ಬಿಡದಿದ್ದರೆ ಬೃಹತ್ ಪ್ರತಿಭಟನೆ : ರೈತ ಮುಖಂಡ ಬಸವರಾಜಪ್ಪ ಎಚ್ಚರಿಕೆ

Date:

ಜುಲೈ 15ರೊಳಗೆ ಶಿವಮೊಗ್ಗದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡದಿದ್ದರೆ, ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್​ ಆರ್​ ಬಸವರಾಜಪ್ಪ ಹೇಳಿದ್ದಾರೆ.

- Advertisement -

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನದಿ ಪಾತ್ರದಿಂದ ನೀರು ಒದಗಿಸಲು ನಮ್ಮ ವಿರೋಧವಿಲ್ಲ. ಆದರೆ ವರ್ಷವಿಡೀ ನದಿಪಾತ್ರದಿಂದ ನೀರು ಪೂರೈಸಲು ಅವಕಾಶವಿಲ್ಲ. ಜುಲೈ 15 ರಿಂದ ಅಣೆಕಟ್ಟಿನಿಂದ ನೀರು ಬಿಡಲಾಗುತ್ತಿದೆ. ಪ್ರಸ್ತುತ ಅಣೆಕಟ್ಟಿನ 71 ಅಡಿ ಟಿಎಂಸಿ ಸಂಗ್ರಹ ಸಾಮರ್ಥ್ಯದಲ್ಲಿ 42% ನೀರು ಸಂಗ್ರಹವಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭದ್ರಾ ಬಲದಂಡಾ ಯೋಜನೆಯಡಿಯಲ್ಲಿ 1600 ಕೋಟಿ ವೆಚ್ಚದಲ್ಲಿ ದಿನಕ್ಕೆ 30 ದಿನಗಳ ಕಾಲ ವರ್ಷವಿಡೀ 1 ಟಿಎಂಸಿ ನೀರು ಪೂರೈಸಲು ಉದ್ದೇಶಿಸಲಾಗಿದೆ. 8 ಎಕರೆ ಪ್ರದೇಶದಲ್ಲಿ ಶುದ್ಧೀಕರಣ ಘಟಕ ನಿರ್ಮಿಸಲಾಗುತ್ತಿದೆ. ಈ ಯೋಜನೆಯ ಅನುಷ್ಠಾನವನ್ನು ಪಂಚಾಯತ್ ರಾಜ್ ಇಲಾಖೆ ನಿರ್ವಹಿಸುತ್ತಿದೆ ಎನ್ನಲಾಗಿದೆ. ನೀರು ಬಿಡಲು ಸಮಯ ಸಮೀಪಿಸುತ್ತಿದೆ. ಆದರೆ, ಅಚ್ಚುಕಟ್ಟು ಪ್ರದೇಶದ ರೈತರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಲ್ ನಿರ್ಮಿಸಿ ಜಲಜೀವನ ಮಿಷನ್ ಯೋಜನೆಗೆ ನೀರು ಹರಿಸಬೇಕಿತ್ತು. ಆ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕಾಮಗಾರಿ ನಡೆಯುತ್ತಿದೆ” ಎಂದು ಬಸವರಾಜಪ್ಪ ಆತಂಕ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

ಒಂದು ವೇಳೆ ಜುಲೈ 15ರ ನಂತರ ಅಚ್ಚುಕಟ್ಟುದಾರರಿಗೆ ಜಲಾಶಯದಿಂದ ನೀರು ಬಿಡದಿದ್ದರೆ, ಅದರಿಂದ ಉಂಟಾಗುವ ಅನಾಹುತಗಳಿಗೆ ಅಧಿಕಾರಿಗಳೇ ನೇರ ಕಾರಣರಾಗುತ್ತಾರೆ. ರಾಜ್ಯ ರೈತ ಸಂಘ ಈ ನಿರ್ಧಾರದ ವಿರುದ್ಧ ದೇವನಹಳ್ಳಿ ಮಾದರಿಯಲ್ಲೇ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧವಿದೆ ಎಂದು ಬಸವರಾಜಪ್ಪ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...