ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಮಹತ್ವದ ಸಭೆ ಆಯೋಜಿಸಿದ್ದರು.
ಸಭೆಯಲ್ಲಿ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ, ಅಡಿಕೆ ಕೊಳೆ ರೋಗ, ಅಡಿಕೆ ತೇವಾಂಶ (ಸಾಂದ್ರತೆ) ಅಡಿಕೆಗೆ ಬೆಂಬಲ ಬೆಲೆ, ಅಡಿಕೆ ರಫ್ತು ಮತ್ತು ಆಮದುಗಳ ಕುರಿತು ಕೇಂದ್ರ ಕೃಷಿ ಸಚಿವರೊಂದಿಗೆ ರಾಜ್ಯದ ಸಂಸದರು ಹಾಗೂ ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

ಸಭೆಯಲ್ಲಿ ರಾಜ್ಯದ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ ಸೋಮಣ್ಣ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಗೋವಿಂದ ಕಾರಜೋಳ, ಯದುವೀರ್ ಒಡೆಯರ್, ಡಾ|| ಪ್ರಭಾ ಮಲ್ಲಿಕಾರ್ಜುನ್, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ಮತ್ತಿತರರು, ಅಧಿಕಾರಿಗಳು ಭಾಗವಹಿಸಿದ್ದರು.