ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರು ನಾಳೆ ದಿವಸ ದಿನಾಂಕ 14 ಜೂನ್ 2025ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ 11ಗಂಟೆವರೆಗೂ ನಗರದ ನೆಹರು ರಸ್ತೆಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದಲ್ಲಿ ಜನ ಸಂಪರ್ಕ ಸಭೆ ಏರ್ಪಡಿಸಿರುತ್ತಾರೆ.
ಜಿಲ್ಲೆಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಚಿವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
