ಸಚಿವ ಮಧು ಬಂಗಾರಪ್ಪ ಮನರೇಗಾ ಯೋಜನೆಯಡಿ ಕಾರ್ಮಿಕರೊಂದಿಗೆ ಸೇರಿ ಶ್ರಮದಾನ ಮಾಡಿರುವ ಫೋಟೋವೊಂದು ವೈರಲ್ ಆಗಿದೆ.

ಇಂದು ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರಾಜೀವ್ ಗಾಂಧಿಯವರ ಕನಸಿನ ಯೋಜನೆಯನ್ನು ಅಂದು ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ರವರು ಪರಿಣಾಮಕಾರಿಯಾಗಿ ಜಾರಿಗೆ ತಂದು ದುಡಿಯುವ ಕೈಗಳಿಗೆ ಉದ್ಯೋಗದ ಜೊತೆಗೆ ರಾಷ್ಟ್ರೀಯ ಸಾಕ್ಷರತಾ ಆಂದೋಲನಕ್ಕೆ ನಾಂದಿ ಹಾಡಿದರು. ಇಂತಹ ಅಭೂತಪೂರ್ವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಚಿವ ಮಧು ಬಂಗಾರಪ್ಪ ಕೋರಿದ್ದಾರೆ.