ಶಿವಮೊಗ್ಗ | ಕೃಷಿ ಸುಧಾರಣೆಯ ಪೂರಕ ಸಂಶೋಧನೆಗೆ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ

Date:

ರೈತರ ಉತ್ಪಾದನೆ ಹಾಗೂ ಜೀವನ ಮಟ್ಟದ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ ಸಂಶೋಧನೆ ಮತ್ತು ತಂತ್ರಜ್ಞಾನದ ವರ್ಗಾವಣೆಗೆ ಇನ್ನಷ್ಟು ಶ್ರಮವಹಿಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದರು.

- Advertisement -

ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಕೆ ಕೃಷಿ ವಿಶ್ವ ವಿದ್ಯಾಲಯದ ವತಿಯಿಂದ ಶಿವಮೊಗ್ಗದ ನವಿಲೆ ಕೃಷಿ ವಿವಿ ಅವರಣದಲ್ಲಿ ಏರ್ಪಡಿಸಿರುವ ‘ ಕೃಷಿ ಮೇಳ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
“ರೈತರು ನಿರಂತರ ಪ್ರಾಕೃತಿಕ‌ ಸವಾಲು ಎದುರಿಸಿ, ಶ್ರಮಪಟ್ಟು ಕೃಷಿ ನಡೆಸುತ್ತಿದ್ದು ಅವರ ನೆರವಿಗೆ ರಾಜ್ಯ ಸರ್ಕಾರ ಸದಾ ನಿಲ್ಲಲಿದೆ. ರೈತರು ವೈಜ್ಞಾನಿಕ ಹಾಗೂ ಸಮಗ್ರ ಬೇಸಾಯದ ಬಗ್ಗೆ ಎಚ್ಚು ಗಮನ ಹರಿಸಬೇಕು, ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಬೇಕು ಇದಕ್ಕೆ ಕೃಷಿ ವಿವಿಗಳು ನೆರವಾಗಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಹೆಚ್ಚು ಧಾನ್ಯಗಳ ಉತ್ಪಾದನೆ ನಮ್ಮ ದೇಶದ ಹಿರಿಮೆ. ಕೃಷಿ ವಿವಿಗಳು ಹೊಸ ತಳಿಗಳು ಹಾಗೂ ತಂತ್ರಜ್ಞಾನದ ಮೂಲಕ‌ ಕಡೆಮೆ ನೀರು ಹಾಗೂ ಸೀಮಿತ ಖರ್ಚಿನಲ್ಲಿ ಅಧಿಕ ಲಾಭ ಪಡೆಯಲು ನೆರವಾಗಬೇಕು‌. ರೈತರ ಬೆಲೆಗಳಿಗೆ ನ್ಯಾಯಯುತ ಬೆಲೆ, ಸೂಕ್ತ ಮಾರುಕಟ್ಟೆ ವ್ಯವಸ್ಥೆ ಜೊತೆಗೆ ಸಂಶೋಧನೆಗಳ ವೈಜ್ಞಾನಿಕ ಅನುಷ್ಠಾನ, ಬರ ನಿರ್ವಹಣೆ ಮಾಡಿದಾಗ ಮಾತ್ರ ಸುಸ್ಥಿರ ಕೃಷಿ ಸಾಧ್ಯ. ರೈತರ ಬದುಕು ಹಸನು ಮಾಡುವುದು ನಮ್ಮ ಹೊಣೆ. ಕೃಷಿ ಸಂಶೋಧನೆ, ಮೌಲ್ಯ ವರ್ಧನೆಗೆ ಹೆಚ್ಚು ಒತ್ತು ನೀಡಬೇಕು. ಸಿರಿಧಾನ್ಯಗಳಿಗೆ ಪ್ರೋತ್ಸಾಹ ಹೆಚ್ಚಬೇಕು ಇಳುವರಿಯೂ ವೃದ್ಧಿಸಬೇಕು. ಕಾಂಗ್ರೆಸ್ ಸರ್ಕಾರ ಕೃಷಿಗೆ‌ ಬೆಂಬಲ, ಸಂಶೋಧನೆಗಳಿಗೆ ನೆರವು, ಪ್ರೋತ್ಸಾಹ ನೀಡಲು ಸದಾ ಸಿದ್ದ” ಎಂದರು.

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಶಿವಮೊಗ್ಗ | 6200 ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ ಅಧಿಕಾರಿಗಳು

“ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಎಂಬ ಘೋಷ ವಾಕ್ಯದೊಂದಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದಲ್ಲಿ ನೂರಾರು ಬಗೆಯ ತಳಿಗಳ‌ ಹಾಗೂ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಗಮನ ಸೆಳೆಯುತ್ತಿದೆ. ಸಾವಿರಾರು ರೈತರು‌ ಮೇಳಕ್ಕೆ ಆಗಮಿಸಿ ವೀಕ್ಷಿಣೆ ನಡೆಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾರದ ಪೂರ್ಯ ನಾಯ್ಕ್, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಶಿವಮೊಗ್ಗ ಕೃಷಿ ವಿವಿಯ ಕುಲಪತಿ ಡಾ. ಜಗದೀಶ್, ವಿವಿಯ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...