ಶಿವಮೊಗ್ಗ | 2ನೆ ದಿನಕ್ಕೆ ಪಾಲಿಕೆ ನೌಕರರ ಮುಷ್ಕರ ; ಬೇಡಿಕೆ ಈಡೇರದ ಹೊರತು ಮುಷ್ಕರ ನಿಲ್ಲದು : ಗೋವಿಂದ್

Date:

Advertisements

ಶಿವಮೊಗ್ಗ, ರಾಜ್ಯದ ೧೩ ಮಹಾನಗರಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ಮುಂದಾಗದಿರುವುದರಿಂದ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಮುಂದುವರೆದಿದೆ.

ಸರ್ಕಾರಿ ನೌಕರರಿಗೆ ಸಮಾನವಾಗಿ , ೭ನೇ ವೇತನ ಆಯೋಗ ಶಿಫಾರಸ್ಸು ಅನ್ವಯಿಸಬೇಕು, ಕೆಜಿಐಡಿ, ಮುಂಬಡ್ತಿ, ಆರೋಗ್ಯ ಸೌಲಭ್ಯಗಳ ನೀಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ವ್ಯಾಪಿ ಮಹಾನಗರ ಪಾಲಿಕೆ ನೌಕರರು ನೆನ್ನೆಯಿಂದ ಮುಷ್ಕರ ಆರಂಭಿಸಿದ್ದಾರೆ.

ಸಂಘದ ಪದಾಧಿಕಾರಿಗಳೊಂದಿಗೆ ಸರ್ಕಾರ ಯಾವುದೇ ಮಾತುಕತೆಗೆ ಮುಂದಾಗದಿರುವ ಸರ್ಕಾರದ ಧೋರಣೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘವು ತೀವ್ರವಾಗಿ ಖಂಡಿಸಿದೆ.

Advertisements
1001870011

ಇಂದು ಕೂಡು ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ನೌಕರರ ಮುಷ್ಕರ ಮುಂದುವರೆದಿದ್ದು, ನಗರದಲ್ಲಿ ಸ್ವಚ್ಚತೆ ಮತ್ತು ವಿವಿಧ ವಿಭಾಗಗಳ ಕೆಲಸ ಕಾರ್ಯಗಳು ಸ್ಥಗಿತಗೊಂಡಿವೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದು ತಿಳಿಸಿದೆ.

ಸರ್ಕಾರ ಬೇಡಿಕೆಗಳನ್ನು ಈಡೇರಿಸದ ಹೊರತು ಮುಷ್ಕರ ಹಿಂಪಡೆಯದಿರಲು ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ನಿರ್ಧರಿಸಿದೆ. ಅದರಂತೆ ಶಿವಮೊಗ್ಗ ದಲ್ಲೂ ಪಾಲಿಕೆ ನೌಕರರ ಮುಷ್ಕರ ಮುಂದುವರೆಯಲಿದೆ .

ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಆದರೆ ನೌಕರರ ಬದುಕಿನ ಪ್ರಶ್ನೆಯೂ ಇರುವುದರಿಂದ ಸಾರ್ವಜನಿಕರು ಮುಷ್ಕರವನ್ನು ಬೆಂಬಲಿಸಬೇಕು ಎಂದು ತಿಳಿಸಿದೆ

1001870020

ಜನಪ್ರತಿನಿಧಿಗಳು , ಸರ್ಕಾರ ನೌಕರರ ಮತ್ತು ಸಾರ್ವಜನಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಎನ್. ಗೋವಿಂದ್ ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಮೋಹನ್, ಪಿ.ಕುಮಾರ್, ಮಂಜಣ್ಣ, ವಸಂತಕುಮಾರ್, ಮಾರುತಿ, ಪೆಂಚಲಯ್ಯ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X